ಕರ್ನಾಟಕ

karnataka

By

Published : Oct 2, 2020, 8:57 PM IST

ETV Bharat / state

ವಿಜಯಪುರ ಜಿಲ್ಲೆಯಲ್ಲಿಂದು 146 ಜನರಿಗೆ ಕೊರೊನಾ; 61 ಮಂದಿ ಡಿಸ್ಚಾರ್ಜ್

ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಂತಿದೆ...

Vijayapura
Vijayapura

ವಿಜಯಪುರ:ಜಿಲ್ಲೆಯಲ್ಲಿ ಇಂದು 146 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಇಂದಿನ ಕೋವಿಡ್ ವಿವರ :

ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,899 ಕ್ಕೆ ಏರಿಕೆಯಾಗಿದೆ.

ಗುಣಮುಖ:

ಈ ದಿನ ಜಿಲ್ಲೆಯಲ್ಲಿ ಕೊರೊನಾದಿಂದ 61 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 8,768 ಕ್ಕೆ ಏರಿಕೆಯಾಗಿದೆ.

ಮೃತರಿಷ್ಟು :

ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗಿನ ಮೃತರ ಸಂಖ್ಯೆ 166 ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ಸಕ್ರಿಯ ಪ್ರಕರಣಗಳು :

ಇನ್ನು 965 ಜನರಿಗೆ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ಕೋವಿಡ್ ಪರೀಕ್ಷೆ:

ಇಲ್ಲಿಯವರೆಗೆ 1,05,617 ಜನರ ಮೇಲೆ ನಿಗಾ ಇಡಲಾಗಿದೆ. 1,07,331 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 96,874 ಜನರ ವರದಿ ನೆಗೆಟಿವ್ ಆಗಿದೆ. 9,899 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 645 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

ABOUT THE AUTHOR

...view details