ಕರ್ನಾಟಕ

karnataka

ETV Bharat / state

ಹತ್ತು ಸಾವಿರ ಗಡಿದಾಟಿದ ಕೊರೊನಾ ಪ್ರಕರಣಗಳು

ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 168ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ..

Vijayapura
Vijayapura

By

Published : Oct 4, 2020, 9:45 PM IST

ವಿಜಯಪುರ : ಜಿಲ್ಲೆಯಲ್ಲಿ ಇಂದು 152 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ ಹತ್ತು ಸಾವಿರ ಗಡಿದಾಟಿದೆ.

ಇಂದಿನ ಕೊರೊನಾ ಪ್ರಕರಣಗಳ ಮಾಹಿತಿ :ಇಂದು ಪತ್ತೆಯಾದ ಕೊರೊನಾ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,148ಕ್ಕೆ ಏರಿಕೆಯಾಗಿದೆ.

ಗುಣಮುಖ :ಇಂದು ಕೊರೊನಾದಿಂದ 43 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 8,942ಕ್ಕೆ ಏರಿಕೆಯಾಗಿದೆ.

ಮೃತರ ವಿವರ :ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 168ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ಸಕ್ರಿಯ ಪ್ರಕರಣಗಳಿಷ್ಟು :ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ 1,038 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಕೋವಿಡ್ ಪರೀಕ್ಷಾ ವಿವರ :ಈವರೆಗೆ 1,08,163 ಜನರ ಮೇಲೆ ನಿಗಾ ಇಡಲಾಗಿದೆ. 1,09,372 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 98,683 ಜನರ ವರದಿ ನೆಗೆಟಿವ್ ಆಗಿವೆ. 10,148 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 628 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ತಿಳಿಸಿದ್ದಾರೆ.

ABOUT THE AUTHOR

...view details