ಕರ್ನಾಟಕ

karnataka

ETV Bharat / state

ವಿಜಯಪುರ ಜಿಲ್ಲೆಯಲ್ಲಿ 176 ಕೊರೊನಾ ಸೋಂಕಿತ ಪ್ರಕರಣ ಪತ್ತೆ - ಕೊರೊನಾ

ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 68 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

vijayapura
ವಿಜಯಪುರ

By

Published : Sep 14, 2020, 9:11 PM IST

ವಿಜಯಪುರ:ಜಿಲ್ಲೆಯಲ್ಲಿ ಇಂದು ಹೊಸದಾಗಿ 176 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇಲ್ಲಿಯವರೆಗೂ ಜಿಲ್ಲೆಯಲ್ಲಿ 7,926 ಜನರಿಗೆ ಸೋಂಕು ತಗುಲಿದೆ.

ಇಂದು ಕೊರೊನಾದಿಂದ 68 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೂ ಒಟ್ಟು ಕೊರೊನಾದಿಂದ ಗುಣಮುಖರಾ‌ದವರ ಸಂಖ್ಯೆ 7,107ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 136ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.

ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 683 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇಲ್ಲಿಯವರೆಗೆ 66,212 ಜನರ ಮೇಲೆ ನಿಗಾ ಇಡಲಾಗಿದೆ. 87,892 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 79, 043 ಜನರ ವರದಿ ನೆಗಟಿವ್ ಆಗಿದೆ. 7,926 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 923 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​ ಕುಮಾರ್​ ತಿಳಿಸಿದ್ದಾರೆ.

ABOUT THE AUTHOR

...view details