ವಿಜಯಪುರ:ಲಾಕ್ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯಡಿ ಪಡಿತರ ಚೀಟಿದಾರರಿಗೆ ಏಪ್ರಿಲ್ ತಿಂಗಳಿನಲ್ಲಿ 18038 ಕ್ವಿಂಟಲ್ ಅಕ್ಕಿ, ಹಾಗೂ 1870 ಕ್ವಿಂಟಲ್ ಗೋಧಿಯನ್ನು ಸರ್ಕಾರದಿಂದ ಜಿಲ್ಲೆಗೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ತಿಳಿಸಿದ್ದಾರೆ.
ವಿಜಯಪುರ: 18038 ಕ್ವಿಂಟಾಲ್ ಅಕ್ಕಿ,1870 ಕ್ವಿಂಟಾಲ್ ಗೋಧಿ ವಿತರಣೆ - ration distributed in vijayapur
ಜಿಲ್ಲೆಯಲ್ಲಿ 835 ನ್ಯಾಯ ಬೆಲೆ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದು, ಈ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಿಗೆ ಆಯಾ ತಾಲ್ಲೂಕು ಸಗಟು ಮಳಿಗೆಗಳಿಂದ ಆಹಾರ ಧಾನ್ಯಗಳು ಈಗಾಗಲೇ ಸಾಗಾಣಿಕೆ ಕಾರ್ಯ ಭರದಿಂದ ಸಾಗಿದ್ದು, ಸುಮಾರು 400 ಅಂಗಡಿಗಳಿಗೆ ಪಡಿತರ ವಸ್ತುಗಳಾದ ಅಕ್ಕಿ ಮತ್ತು ಗೋಧಿಯನ್ನು ಸಾಗಾಣಿಕೆ ಮಾಡಲಾಗಿದೆ.
ಜಿಲ್ಲೆಯಲ್ಲಿ 835 ನ್ಯಾಯ ಬೆಲೆ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದು, ಈ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಿಗೆ ಆಯಾ ತಾಲೂಕು ಸಗಟು ಮಳಿಗೆಗಳಿಂದ ಆಹಾರ ಧಾನ್ಯಗಳು ಈಗಾಗಲೇ ಸಾಗಾಣಿಕೆ ಕಾರ್ಯ ಭರದಿಂದ ಸಾಗಿದ್ದು, ಸುಮಾರು 400 ಅಂಗಡಿಗಳಿಗೆ ಪಡಿತರ ವಸ್ತುಗಳಾದ ಅಕ್ಕಿ ಮತ್ತು ಗೋಧಿಯನ್ನು ಸಾಗಾಣಿಕೆ ಮಾಡಲಾಗಿದೆ ಎಂದರು.
ಏಪ್ರಿಲ್ ತಿಂಗಳಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯ ಅನ್ನಭಾಗ್ಯ ಯೋಜನೆಯಡಿ ಪ್ರತಿ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿದಾರರಿಗೆ 70 ಕೆಜಿ ಅಕ್ಕಿ, ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಯೂನಿಟ್ಗೆ 10 ಕೆಜಿ ಅಕ್ಕಿ ಹಾಗೂ ಪ್ರತಿ ಬಿಪಿಎಲ್ ಪಡಿತರ ಚೀಟಿಗೆ 4 ಕೆಜಿ ಗೋಧಿಯಂತೆ ಉಚಿತವಾಗಿ ವಿತರಣೆ ಮಾಡಲು ಹಂಚಿಕೆ ಮಾಡಲಾಗುತ್ತದೆ. ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳು ಪಡಿತರ ಹಂಚಿಕೆ ಮಾಡಲು ಕಾರ್ಯಾರಂಭ ಮಾಡಲು ಈಗಾಗಲೇ ಸೂಚಿಸಲಾಗಿದ್ದು, ರಜಾ ಅವಧಿಯಲ್ಲೂ ಕಾರ್ಯ ನಿರ್ವಹಿಸಲಿದ್ದಾರೆ. ಆಯಾ ತಾಲ್ಲೂಕಿನ ತಹಶೀಲ್ದಾರರು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.