ವಿಜಯಪುರ: ಹೊರ ರಾಜ್ಯದಿಂದ ಕೊರೊನಾ ಹೊತ್ತು ಬರುವವರ ಮೇಲೆ ನಿಗಾ ವಹಿಸಲು ವಿಜಯಪುರ ಜಿಲ್ಲಾಡಳಿತ ಚೆಕ್ ಪೋಸ್ಟ್ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದೆ.
ಕೇವಲ 5 ದಿನಗಳಲ್ಲಿ 19 ಕೊರೊನಾ ಪಾಸಿಟಿವ್: ಇನ್ನಷ್ಟು ಅಲರ್ಟ್ ಆದ ವಿಜಯಪುರ ಜಿಲ್ಲಾಡಳಿತ
ವಿಜಯಪುರ ಜಿಲ್ಲೆಯಲ್ಲಿ ಕೇವಲ 5 ದಿನಗಳಲ್ಲಿ 19 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇವರೆಲ್ಲರೂ ಮಹಾರಾಷ್ಟ್ರದಿಂದ ಬಂದವರೇ ಆಗಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಕೇವಲ 5 ದಿನಗಳಲ್ಲಿ 19 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇವರೆಲ್ಲರೂ ಮಹಾರಾಷ್ಟ್ರದಿಂದ ಬಂದವರೇ ಆಗಿದ್ದಾರೆ. ಈ ಹಿನ್ನೆಲೆ ಜಿಲ್ಲಾಡಳಿತ ಇನ್ನಷ್ಟು ಬಿಗಿ ಭದ್ರತೆಗೆ ಮುಂದಾಗಿದೆ. ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳಿಂದ ಜನರು ಬಾರದಂತೆ ಕಣ್ಣಿಡಲು ಜಿಲ್ಲಾಡಳಿತ ಚೆಕ್ಪೋಸ್ಟ್ಗಳ ಬಳಿ ಸಿಸಿಟಿವಿ ಕ್ಯಾಮರಾ ಅಳವಡಿಸಿದೆ.
ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಚೆಕ್ ಪೋಸ್ಟ್ನಲ್ಲಿ ಸಿಸಿಟಿವಿ ಕ್ಯಾಮರಾ ಹಾಕಲಾಗಿದ್ದು, ಹೊರ ಹೋಗುವವರ ಹಾಗೂ ಒಳ ಬರುವವರ ಮೇಲೆ ಕಣ್ಣಿಡಲಾಗಿದೆ ಎಂದು ನಿಡಗುಂದಿ ತಹಶೀಲ್ದಾರ್ ತಿಳಿಸಿದ್ದಾರೆ.