ವಿಜಯಪುರ:ಜಿಲ್ಲೆಯಲ್ಲಿ ಮತ್ತೆ ಮೂವರಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿದೆ.
ಮಾಜಿ ಶಾಸಕರೊಬ್ಬರಿಗೆ ಸೇರಿದಂತೆ ಓರ್ವ ಮಹಿಳೆ ಹಾಗೂ ವೃದ್ಧನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಹಿಳೆ ಹಾಗೂ ವೃದ್ಧ ನೆಗಡಿಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಇಬ್ಬರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಇಬ್ಬರಿಗೂ ಸೋಂಕು ಇರುವುದು ಪತ್ತೆಯಾಗಿದೆ.