ಕರ್ನಾಟಕ

karnataka

ETV Bharat / state

ವಿಜಯಪುರ: ಗ್ರಾಪಂ ಚುನಾವಣೆಗೆ ಮತದಾರರ ಕರಡು ಪಟ್ಟಿ ಪ್ರಕಟ - Vijayapura latest news

ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಯ ಮತದಾರರ ಕರಡು ಪಟ್ಟಿ ತಯಾರಿಸಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Vijayapura
Vijayapura

By

Published : Aug 13, 2020, 10:48 AM IST

ವಿಜಯಪುರ: ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಜಿಲ್ಲೆಯ ಗ್ರಾಪಂ ಚುನಾವಣೆ 2020ರ ಮತದಾರರ ಕರಡು ಪಟ್ಟಿ ತಯಾರಿಸಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ತಹಶೀಲ್ದಾರ, ಗ್ರಾಮ ಪಂಚಾಯಿತಿ ಕಾರ್ಯಾಲಯಗಳಲ್ಲಿ ಹಾಗೂ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಸಾರ್ವಜನಿಕರು ಮತ್ತು ಮತದಾರರ ವೀಕ್ಷಣೆಗೆ ಕರಡು ಪ್ರತಿಯನ್ನು ಇರಿಸಲಾಗಿದೆ. ಪ್ರಕಟ ಮಾಡಿರುವ ಕರಡು ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಅದನ್ನು ಆಗಸ್ಟ್ 14ರ ಒಳಗೆ ಸಲ್ಲಿಸಬೇಕು.

ಮತದಾರರ ಹೆಸರು, ವಾಸವಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ಇರದ ಬೇರೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಆ ಬಗ್ಗೆ ಆಕ್ಷೇಪಣೆಗಳನ್ನು ಸಂಬಂಧಪಟ್ಟ ತಹಶೀಲ್ದಾರರಿಗೆ ಸಲ್ಲಿಸಬಹುದು.

ನಗರ ಪ್ರದೇಶದ ಮತದಾರರ ಹೆಸರು ಅಥವಾ ವಿಧಾನಸಭಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೆ ಇರುವ ಹೆಸರುಗಳನ್ನು ಗ್ರಾಮ ಪಂಚಾಯಿತಿಗೆ ತಯಾರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ. ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ಅಂತಿಮ ಮತದಾರರ ಪಟ್ಟಿಗಳನ್ನು ಆಗಸ್ಟ್ 31ರಂದು ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details