ವಿಜಯಪುರ: ಜಿಲ್ಲೆಯ 209 ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
209 ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ - Vijayapura administrative offices appoint news
ವಿಜಯಪುರ ಜಿಲ್ಲೆಯ 209 ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Gram panchayath
ವಿಜಯಪುರ ಜಿಲ್ಲೆಯ 209 ಗ್ರಾಮ ಪಂಚಾಯತಿಗಳ 5 ವರ್ಷದ ಪೂರ್ಣಾವಧಿ ಜೂನ್ನಲ್ಲಿ ಮುಗಿದಿರುವ ಕಾರಣ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಆದೇಶ ಹೊರಡಿಸಿದ್ದಾರೆ.
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ ಸಾರ್ವತ್ರಿಕ ಚುನಾವಣೆ ಮಾಡದಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ 209 ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮುಂದೆ ನಡೆಯುವ ಚುನಾವಣೆ ನಂತರ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಾಗುವವರೆಗೆ ಆಡಳಿತಾಧಿಕಾರಿಗಳ ಅಧಿಕಾರ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ.