ಮುದ್ದೇಬಿಹಾಳ(ವಿಜಯಪುರ):ಮುದ್ದೇಬಿಹಾಳ ಪಟ್ಟಣದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ವಿಕಲಚೇತನರಿಗೆ ಸಲಕರಣೆಗಳನ್ನ ವಿತರಣೆ ಮಾಡಲಾಯಿತು.
ವಿಕಲಚೇತನರಿಗೆ ಸಲಕರಣೆ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಶ್ರೀನಿವಾಸ ಪೂಜಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಜಯಪುರ ಜಿಲ್ಲೆಯ ವಿವಿಧ ಚಟುವಟಿಕೆಗಳು, ಗ್ರಾಮೀಣ ಪ್ರದೇಶದ ರೈತರು ಹಾಗೂ ಮಹಿಳಾ ಸಂಘಗಳಿಗೆ 227 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ ಎಂದರು.