ವಿಜಯಪುರ: ಜಿಲ್ಲೆಯಲ್ಲಿ ಇಂದು 30 ಹೊಸದಾಗಿ ಕೊರೊನಾ ಪಾಸಿಟಿವ್ ದೃಢವಾಗಿದೆ. ಇಲ್ಲಿವರೆಗೆ ಜಿಲ್ಲೆಯಲ್ಲಿ 7,750 ಜನರಿಗೆ ಸೋಂಕು ತಗುಲಿದೆ.
ವಿಜಯಪುರ ಜಿಲ್ಲೆಯಲ್ಲಿ ಇಂದು 30 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ...
ವಿಜಯಪುರ ಜಿಲ್ಲೆಯಲ್ಲಿ ಇಂದು 30 ಹೊಸದಾಗಿ ಕೊರೊನಾ ಪಾಸಿಟಿವ್ ದೃಢವಾಗಿದೆ.
ಇಂದು ಕೊರೊನಾದಿಂದ 84 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 7,039 ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಇವುಗಳ ಸಂಖ್ಯೆ 134 ಕ್ಕೆ ಏರಿಕೆಯಾಗಿದೆ. ಮೃತನ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.
ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 577 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇಲ್ಲಿಯವರೆಗೆ 65,175 ಜನರ ಮೇಲೆ ನಿಗಾ ಇಡಲಾಗಿದೆ. 86,856 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 78,340 ಜನರ ವರದಿ ನೆಗೆಟಿವ್ ಆಗಿದೆ. 7,750 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 767 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.