ವಿಜಯಪುರ: ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ 48 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 758ಕ್ಕೇರಿದೆ.
ವಿಜಯಪುರದಲ್ಲಿ ನಿನ್ನೆ 48 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆ - ವಿಜಯಪುರ ಲೆಟೆಸ್ಟ್ ಕೊರೊನಾ ಅಪ್ಡೇಟ್
ವಿಜಯಪುರದಲ್ಲಿ ನಿನ್ನೆ ಒಂದೇ ದಿನ 39 ಪುರುಷರು ಹಾಗೂ 9 ಮಹಿಳೆಯರಲ್ಲಿ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕಿತರ ಸಂಪರ್ಕದಿಂದ 12 ಜನರಿಗೆ ಸೋಂಕು ತಗುಲಿದ್ದು, ಆರೋಗ್ಯ ಇಲಾಖೆಯ ನಾಲ್ವರು ಸಿಬ್ಬಂದಿಗೆ ಪಾಸಿಟಿವ್ ಬಂದಿದೆ.
39 ಪುರುಷರು ಹಾಗೂ 9 ಮಹಿಳೆಯರಲ್ಲಿ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕಿತರ ಸಂಪರ್ಕದಿಂದ 12 ಜನರಿಗೆ ಸೋಂಕು ತಗುಲಿದ್ದು, ಆರೋಗ್ಯ ಇಲಾಖೆಯ ನಾಲ್ವರು ಸಿಬ್ಬಂದಿಗೆ ಪಾಸಿಟಿವ್ ಬಂದಿದೆ. ಜ್ವರ ಹಾಗೂ ನೆಗಡಿಯಿಂದ ಬಳಲುತ್ತಿದ್ದ 17 ಜನರಲ್ಲಿ ಪಾಸಿಟಿವ್ ದೃಢಪಟ್ಟಿದೆ. ಓರ್ವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಿಬ್ಬಂದಿ ಹಾಗೂ ಕಂಟೈನ್ಮೆಂಟ್ ಪ್ರದೇಶದ 9 ಜನರಲ್ಲಿ ಸೋಂಕು ಪತ್ತೆಯಾಗಿದೆ. ಪಶ್ಚಿಮ ಬಂಗಾಳದಿಂದ ಆಗಮಿಸಿದ ಇಬ್ಬರು ಪುರುಷರಲ್ಲಿಯೂ ಸೋಂಕು ಪತ್ತೆಯಾಗಿದೆ.
ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿದೆ. ಇನ್ನು 17 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಿ, ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 480ಕ್ಕೆ ತಲುಪಿದೆ. 263 ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 15 ಜನರು ಸೋಂಕಿಗೆ ಬಲಿಯಾಗಿದ್ದಾರೆ.