ವಿಜಯಪುರ :ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದ 100 ಜನರ ಗಂಟಲು ದ್ರವ ಸಂಗ್ರಹಿಸಲಾಗಿತ್ತು. ಆ ಪೈಕಿ 56 ಜನರಿಗೆ ಸೋಂಕು ಇರುವುದು ದೃಢ ಪಟ್ಟಿದೆ.
ಈ ಹಿನ್ನೆಲೆಯಲ್ಲಿ ಇಂದು ಚಡಚಣ ತಾಲೂಕು ಆಡಳಿತ ಗೋವಿಂದಪುರ ಗ್ರಾಮಕ್ಕೆ ಭೇಟಿ ನೀಡಿತು. ಕೊರೊನಾ ಸೋಂಕಿತರನ್ನು ಹೋಂ ಕ್ವಾರಂಟೈನ್ ಮಾಡಿ ಅವರಿಗೆ ಮಾತ್ರೆಗಳನ್ನು ನೀಡಿ ಧೈರ್ಯ ತುಂಬಿದರು.