ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ಇಂದು 6 ಮಂದಿ ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ - vijaypur

ವಿಜಯಪುರದಲ್ಲಿ ಇಂದು 6 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 31 ಕೊರೊನಾ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

6 corona infected people  cured in vijaypur
ವಿಜಯಪುರದಲ್ಲಿ ಇಂದು 6 ಮಂದಿ ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

By

Published : May 9, 2020, 9:56 PM IST

ವಿಜಯಪುರ: ಕೊರೊನಾ ಸೋಂಕಿನಿಂದ ಗುಣಮುಖರಾದ 6 ಜನರು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

ವಿಜಯಪುರದಲ್ಲಿ ಇಂದು 6 ಮಂದಿ ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್


ಇಂದು 50 ವರ್ಷದ ಮಹಿಳೆ ರೋಗಿ ಸಂಖ್ಯೆ 397, 28 ವರ್ಷದ ಪುರುಷ ರೋಗಿ ಸಂಖ್ಯೆ 402, 14 ವರ್ಷದ ಬಾಲಕ ರೋಗಿ ಸಂಖ್ಯೆ 407, 18 ವರ್ಷದ ಯುವತಿ ರೋಗಿ ಸಂಖ್ಯೆ 410, 27 ವರ್ಷದ ಯುವಕ ರೋಗಿ ಸಂಖ್ಯೆ 467 ಹಾಗೂ 27 ವರ್ಷದ ಯುವಕ ರೋಗಿ ಸಂಖ್ಯೆ 511 ಇವರು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರೋಗಿ ಸಂಖ್ಯೆ 510 ಸಂಪರ್ಕದಿಂದ 11 ವರ್ಷದ ಹೆಣ್ಣು ಮಗುವಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಇಂದು ದೃಢಪಟ್ಟಿದ್ದು, ರೋಗಿ ಸಂಖ್ಯೆ 769 ಇವರು ಕಂಟೈಂನ್​ಮೆಂಟ್​ ವಲಯದಿಂದ ಬಂದವರಾಗಿದ್ದಾರೆ. ಒಟ್ಟಾರೆ ಈವರೆಗೆ ಒಟ್ಟು 49 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಆ ಪೈಕಿ ಒಟ್ಟು 31 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ, ಮೂವರು ಜನರು ಸಾವನ್ನಪ್ಪಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ 15 ಮಂದಿ ಸಕ್ರಿಯ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.


ಜಿಲ್ಲೆಯಲ್ಲಿ ಈವರೆಗೆ 2085 ಜನರು ವಿದೇಶ ಮತ್ತು ಇತರೆ ಕಡೆಗಳಿಂದ ಬಂದ ಬಗ್ಗೆ ವರದಿಯಾಗಿದ್ದು, ತೀವ್ರ ನಿಗಾ ಇಡಲಾಗಿದೆ. 1,590 ಜನರು 1ರಿಂದ 28 ದಿನಗಳವರೆಗಿನ ಕ್ವಾರಂಟೈನ್​ ಅವಧಿಯಲ್ಲಿದ್ದಾರೆ. ಈವರೆಗೆ 2432 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, 2,328 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. 55 ಜನರ ವರದಿ ಇನ್ನೂ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ABOUT THE AUTHOR

...view details