ವಿಜಯಪುರ:ಜಿಲ್ಲೆಯಲ್ಲಿ ಇಂದು 63 ಹೊಸದಾಗಿ ಕೊರೊನಾ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಇಲ್ಲಿವರೆಗೆ 12,148 ಜನರಿಗೆ ಸೋಂಕು ತಗುಲಿದೆ.
ವಿಜಯಪುರ ಜಿಲ್ಲೆಯಲ್ಲಿ 63 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢ - ವಿಜಯಪುರ ಕೊರೊನಾ ಸುದ್ದಿ
ವಿಜಯಪುರ ಜಿಲ್ಲೆಯಲ್ಲಿ ಇಂದು 59 ಮಂದಿ ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಕೊರೊನಾದಿಂದ 59 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 11,564ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಲ್ಲಿಯವರೆಗೂ 191 ಜನ ಮೃತ ಪಟ್ಟಿದ್ದಾರೆ.
ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 393 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 1,36,313 ಜನರ ಮೇಲೆ ನಿಗಾ ಇಡಲಾಗಿದೆ. 1,35,451 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,22,089 ಜನರ ವರದಿ ನೆಗೆಟಿವ್ ಆಗಿದೆ. ಇನ್ನೂ 1,216 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.