ವಿಜಯಪುರ: ಜಿಲ್ಲೆಯಲ್ಲಿ ಈ ವರೆಗೆ ಕೊರೊನಾ ರೋಗ ತಪಾಸಣೆಗೆ ಒಳಗಾದವರ ಸಂಖ್ಯೆ 1ಲಕ್ಷ ಗಡಿದಾಟಿದ್ದು, ಇಂದು 67 ಹೊಸದಾಗಿ ಪಾಸಿಟಿವ್ ಪ್ರಕರಣಗಳು ದೃಢವಾಗಿದೆ.
ವಿಜಯಪುರ: 1ಲಕ್ಷಕ್ಕೆ ಏರಿದ ಸ್ವ್ಯಾಬ್ ಟೆಸ್ಟ್ಗೆ ಒಳಗಾದವರ ಸಂಖ್ಯೆ - vijayapura corona cases
ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ವರದಿ ಬಿಡುಗಡೆ ಮಾಡಿದ್ದು, ವಿಜಯಪುರ ಜಿಲ್ಲೆಯಲ್ಲಿಂದು 67 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.

ಜಿಲ್ಲೆಯಲ್ಲಿ ಒಟ್ಟು 9126 ಜನರಿಗೆ ಸೋಂಕು ತಗುಲಿದೆ. ಇಂದು 109 ಜನ ಗುಣಮುಖರಾಗಿದ್ದು, ಒಟ್ಟು 8,319 ಸೋಂಕಿತರು ಈವರೆಗೆ ಡಿಸ್ಚಾರ್ಜ್ ಆಗಿದ್ದಾರೆ. ನಾನಾ ಕಾಯಿಲೆಯಿಂದ ಬಳಲುತ್ತಿದ್ದ ಕೊರೊನಾ ಇಬ್ಬರು ಸೋಂಕಿತರು ಇಂದು ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 158ಕ್ಕೆ ಏರಿಕೆಯಾಗಿದೆ.
ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 649 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 97,013 ಜನರ ಮೇಲೆ ನಿಗಾ ಇಡಲಾಗಿದೆ. 1,00,430 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 89,955 ಜನರ ವರದಿ ನೆಗಟಿವ್ ಬಂದಿದ್ದು, 9,126 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 1,511 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.