ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯ ನಿಡಗುಂದಿ ತಾಲೂಕಿನ ಲಾಲ್ ಬಹದ್ದೂರ್ ಶಾಸ್ತ್ರಿ(ಆಲಮಟ್ಟಿ) ಜಲಾಶಯಕ್ಕೆ ಅಧಿಕ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ 22 ಗೇಟ್ಗಳ ಮೂಲಕ 70 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದೆ.
ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ 22 ಗೇಟ್ ಮೂಲಕ 70 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ... - Lal Bahadur Shastri reservoir
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಲಾಲ್ ಬಹದ್ದೂರ ಶಾಸ್ತ್ರಿ(ಆಲಮಟ್ಟಿ) ಜಲಾಶಯಕ್ಕೆ ಅಧಿಕ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ 22 ಗೇಟ್ಗಳ ಮೂಲಕ 70 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದೆ.
ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ
ಗುರುವಾರ ಸಂಜೆವರೆಗೆ ಅಣೆಕಟ್ಟೆ ಒಳ ಹರಿವು 1.900 ಲಕ್ಷ ಕ್ಯೂಸೆಕ್ ನೀರು ಹರಿದು ಬಂದಿದೆ. ಜಲಾಶಯದಲ್ಲಿ ಒಟ್ಟು ಸಂಗ್ರಹ 519.60 ಮೀಟರ್ ನೀರಿನ ಎತ್ತರವಿದೆ. ಸದ್ಯ 517.94 ಮೀಟರ್ವರೆಗೆ ನೀರಿನ ಎತ್ತರ ಬಂದಿದೆ.
ಇನ್ನು ಜಲಾಶಯದಲ್ಲಿ 123.81 ಟಿಎಂಸಿ ಸಂಗ್ರಹ ಸಾಮರ್ಥ್ಯದಲ್ಲಿ ಗುರುವಾರ ಸಂಜೆ 96.8 ಟಿಎಂಸಿ ನೀರು ಅಣೆಕಟ್ಟೆಯಲ್ಲಿ ಸಂಗ್ರಹವಿದೆ ಎಂದು ಕೆಬಿಜೆಎನ್‌ಎಲ್ ಮೂಲಗಳು ತಿಳಿಸಿವೆ.