ಕರ್ನಾಟಕ

karnataka

ETV Bharat / state

ಮುದ್ದೇಬಿಹಾಳದಲ್ಲಿ ಸರಳವಾಗಿ ಸ್ವಾತಂತ್ರ ದಿನ ಆಚರಣೆ - 74ನೇ ಸ್ವಾತಂತ್ರೋತ್ಸವ

ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್​ಗಳಾದ ವೈದ್ಯರು, ಆರೋಗ್ಯ ಸಹಾಯಕರು, ಪುರಸಭೆಯ ಪೌರಕಾರ್ಮಿಕರು, ಆಶಾ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.

Independence Day Celebration
ಮಕ್ಕಳ ನಲಿದಾಟವಿಲ್ಲದೇ ಮಂಕಾದ 74ನೇ ಸ್ವಾತಂತ್ರೋತ್ಸವ

By

Published : Aug 16, 2020, 12:09 AM IST

ಮುದ್ದೇಬಿಹಾಳ:ಕೊರೊನಾದಂತಹ ಸಂಕಷ್ಟದ ಕಾಲದಲ್ಲೂ ಮತಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ 20 ಕೋಟಿ ರೂ. ಅನುದಾನ ತರಲಾಗಿದ್ದು, ಪಟ್ಟಣದ ಅಭಿವೃದ್ಧಿಗೆ 10 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಶಾಸಕರ ಸಹೋದರ, ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.

74ನೇ ಸ್ವಾತಂತ್ರೋತ್ಸವ ದಿನಾಚರಣೆ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ 74ನೇ ಸ್ವಾತಂತ್ರೋತ್ಸವದ ಅಂಗವಾಗಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ದೇಶದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸುತ್ತಿದ್ದಾರೆ. ರಾಜ್ಯ ಸರ್ಕಾರವೂ ಸಂಕಷ್ಟದ ಕಾಲದಲ್ಲಿ ಅಭಿವೃದ್ದಿಯತ್ತ ಹೆಜ್ಜೆ ಹಾಕುತ್ತಿದೆ. ಕಳೆದ ವರ್ಷ ಪ್ರವಾಹದ ಸಂಕಷ್ಟದಿಂದ ನಲುಗಿದ್ದ ರಾಜ್ಯದಲ್ಲಿ ಈ ವರ್ಷ ಕೊರೊನಾ ವೈರಸ್ ಕಾಡಿದೆ. ಅಂತಹ ಸಂದರ್ಭದಲ್ಲೂ ಕ್ಷೇತ್ರದ ಅಭಿವೃದ್ಧಿಗೆ ಶಾಸಕರ ವಿಶೇಷ ಪ್ರಯತ್ನದಿಂದ 20 ಕೋಟಿ ರೂಪಾಯಿಗಳ ಅನುದಾನವನ್ನು ತರಲಾಗಿದೆ. ಪ್ರತಿ ವರ್ಷ ಪಟ್ಟಣದ ಅಭಿವೃದ್ಧಿಗೆ ಅನುದಾನ ನೀಡಲಾಗುವುದು. ನಗರದ ಅಭಿವೃದ್ಧಿಗೆ ಪುರಸಭೆಯ ಸದಸ್ಯರ ಸಹಕಾರ ಮುಖ್ಯವಾಗಿದೆ ಎಂದು ಹೇಳಿದರು.

ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ಜಿ.ಎಸ್.ಮಳಗಿ ಮಾತನಾಡಿ, ಕೋವಿಡ್-19 ವೈರಸ್​ ನಿಯಂತ್ರಣಕ್ಕೆ ಆರೋಗ್ಯ, ಆಶಾ, ಪೊಲೀಸ್, ಕಂದಾಯ, ತಾ.ಪಂ, ಅಂಗನವಾಡಿ ಸೇರಿದಂತೆ ಎಲ್ಲಾ ಇಲಾಖೆಯ ಸಹಕಾರ ದೊರೆತಿದೆ. ದೇಶವನ್ನು ಕಾಡುತ್ತಿರುವ ಭಯೋತ್ಪಾದನೆಯನ್ನು ಹತ್ತಿಕ್ಕಲು ನಾವೆಲ್ಲ ಸಂಘಟಿತರಾಗಿ ಹೋರಾಟ ನಡೆಸಬೇಕಿದೆ. ಈ ಬಾರಿ ಸರ್ಕಾರದ ಆದೇಶದಂತೆ ಸರಳವಾಗಿ ಸ್ವಾತಂತ್ರ‍್ಯ ದಿನಾಚರಣೆ ಆಚರಿಸುತ್ತಿದ್ದೇವೆ ಎಂದರು.

ತಾಪ. ಅಧ್ಯಕ್ಷೆ ಲಕ್ಷ್ಮೀಬಾಯಿ ಹವಾಲ್ದಾರ್ ಕಾರ್ಯಕ್ರಮ ಉದ್ಘಾಟಿಸಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ಸಿಪಿಐ ಆನಂದ ವಾಘಮೋಡೆ, ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ, ಕಸಾಪ ಅಧ್ಯಕ್ಷ ಎಂ.ಬಿ.ನಾವದಗಿ ಇತರರು ಇದ್ದರು.

ABOUT THE AUTHOR

...view details