ವಿಜಯಪುರ :ಜಿಲ್ಲೆಯಲ್ಲಿ ಇಂದು 80 ಜನರಿಗೆ ಹೊಸದಾಗಿ ಪಾಸಿಟಿವ್ ದೃಢಪಟ್ಟಿವೆ.
ಇಂದಿನ ಕೊರೊನಾ ಪ್ರಕರಣಗಳ ವಿವಿರ:
ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,495 ಕ್ಕೆ ಏರಿಕೆಯಾಗಿದೆ.
ಗುಣಮುಖ :
ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 79 ಜನರು ಗುಣಮುಖರಾಗಿ ವಿವಿಧ ಕೋವಿಡ್ ಆಸ್ಪತ್ರಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 8,634 ಮಂದಿ ಗುಣಮುಖರಾಗಿದ್ದಾರೆ.
ಮೃತರ ಮಾಹಿತಿ :
ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ 164 ಕ್ಕೆ ಏರಿಕೆಯಾಗಿದೆ.ಮೃತರ ಅಂತ್ಯ ಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ.
ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 698 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಕೋವಿಡ್ ಪರೀಕ್ಷೆ :
ಇಲ್ಲಿಯವರೆಗೆ 1, 02,528 ಜನರ ಮೇಲೆ ನಿಗಾ ಇಡಲಾಗಿದೆ. 1,04,660 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 94,409 ಜನರ ವರದಿ ನೆಗೆಟಿವ್ ಆಗಿದೆ. 9,495 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 760 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.