ವಿಜಯಪುರ:ಜಿಲ್ಲೆಯಲ್ಲಿ ಇಲ್ಲಿಯವರೆಗೆ ಕೊರೊನಾ ಪರೀಕ್ಷೆ ಮಾಡಿಸಿದವರಲ್ಲಿ ನೆಗೆಟಿವ್ ಬಂದವರ ಸಂಖ್ಯೆ 1ಲಕ್ಷದ ಗಡಿದಾಟಿದೆ. ಹೊಸದಾಗಿ 80 ಮಂದಿಗೆ ಪಾಸಿಟಿವ್ ದೃಢವಾಗಿದ್ದು, ಸೋಂಕಿತರ ಸಂಖ್ಯೆ 10,364ಕ್ಕೆ ಏರಿಕೆಯಾಗಿದೆ.
ವಿಜಯಪುರ ಜಿಲ್ಲೆಯಲ್ಲಿ 1 ಲಕ್ಷ ಗಡಿದಾಟಿದ ಕೊರೊನಾ ನೆಗೆಟಿವ್ ಸಂಖ್ಯೆ - ವಿಜಯಪುರ ಕೊರೊನಾ ವರದಿ ಸುದ್ದಿ
ವಿಜಯಪುರ ಜಿಲ್ಲೆಯಲ್ಲಿ ಕೊರೊನಾದಿಂದ 57 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 9,078ಕ್ಕೆ ಏರಿಕೆಯಾಗಿದೆ.
ಕೊರೊನಾದಿಂದ 57 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 9,078ಕ್ಕೆ ಏರಿಕೆಯಾಗಿದೆ. ವಿವಿಧ ಕಾಯಿಲೆ, ಕೊರೊನಾ ಸೋಂಕಿನಿಂದ ಮಂಗಳವಾರ ಒಬ್ಬರು ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ 170ಕ್ಕೆ ಏರಿದೆ.
ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ 1,116 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 1,10,919 ಜನರ ಮೇಲೆ ನಿಗಾ ಇಡಲಾಗಿದೆ. 1,11,728 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,00,779 ಜನರ ವರದಿ ನೆಗೆಟಿವ್ ಆಗಿದೆ. 10,364 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. 679 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ಕುಮಾರ್ ತಿಳಿಸಿದ್ದಾರೆ.