ವಿಜಯಪುರ:ಜಿಲ್ಲೆಯಲ್ಲಿ ಇಂದು 86 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 8365 ಕ್ಕೆ ಏರಿಕೆಯಾಗಿದೆ.
ವಿಜಯಪುರ: 86 ಸೋಂಕಿತರು ಪತ್ತೆ, 77 ಜನ ಗುಣಮುಖ - ಕೊರೊನಾ ವೈರಸ್
ವಿಜಯಪುರ ಜಿಲ್ಲೆಯಲ್ಲಿ ಇಂದು 77 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಅಲ್ಲದೆ 86 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ವಿಜಯಪುರ ಕೊರೊನಾ ವರದಿ
ಇಂದು 77 ಜನ ಸೋಂಕಿತರು ಗುಣಮುಖರಾಗಿದ್ದು, ಈವರೆಗೆ ಡಿಸ್ಚಾರ್ಚ್ ಆದವರ ಸಂಖ್ಯೆ 7410 ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 143 ಜನ ಕೋವಿಡ್ಗೆ ಬಲಿಯಾಗಿದ್ದಾರೆ.
ಜಿಲ್ಲಾಸ್ಪತ್ರೆ ಸೇರಿದಂತೆ ನಗರದ ನಾನಾ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 812 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.