ವಿಜಯಪುರ/ಬಾಗಲಕೋಟೆ:ವಿಜಯಪುರ ಜಿಲ್ಲೆಯಲ್ಲಿ ಇಂದು ಹೊಸದಾಗಿ 87 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇಲ್ಲಿವರೆಗೆ 11,112 ಜನರಿಗೆ ಸೋಂಕು ತಗುಲಿದೆ.
ಇಂದು ಕೊರೊನಾದಿಂದ 132 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 1,0,033ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ ಹಾಗೂ ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 177ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಹೊಸದಾಗಿ 88 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 92 ಜನ ಕೋವಿಡ್ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11,866 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 10,994 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 21, ಬಾದಾಮಿ 16, ಹುನಗುಂದ 14, ಬೀಳಗಿ 3, ಮುಧೋಳ 18, ಜಮಖಂಡಿ 16 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.