ಕರ್ನಾಟಕ

karnataka

ETV Bharat / state

ಕ್ಷೇತ್ರದ ಅಭಿವೃದ್ಧಿಗೆ 900 ಕೋಟಿ ರೂ ಅನುದಾನ: ಶಾಸಕ ನಡಹಳ್ಳಿ - muddebihal devlopment

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಕ್ಷೇತ್ರದ ಅಭಿವೃದ್ಧಿಗೆ 900 ಕೋಟಿ ರೂಪಾಯಿ ಯೋಜನೆಗೆ ಮಂಜೂರಾತಿ ಸಿಕ್ಕಿದೆ ಎಂದು ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹೇಳಿದರು.

900-crore-for-muddebihal-development-said-mla-nadahalli
ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

By

Published : Aug 30, 2020, 8:47 PM IST

ಮುದ್ದೇಬಿಹಾಳ:126 ಹಳ್ಳಿಗಳು, ಎರಡು ಪುರಸಭೆ, ಒಂದು ಪಟ್ಟಣ ಪಂಚಾಯಿತಿ ಒಳಗೊಂಡಿರುವ ಕ್ಷೇತ್ರದ ಪ್ರತಿಯೊಬ್ಬರ ಮನೆಗೆ ನೀರು ಪೂರೈಸುವ ಸಲುವಾಗಿ 900 ಕೋಟಿ ರೂಪಾಯಿ ಯೋಜನೆಗೆ ಮಂಜೂರಾತಿ ಸಿಕ್ಕಿದೆ ಎಂದು ಆಹಾರ ಪೂರೈಕೆ ನಿಗಮದ ಅಧ್ಯಕ್ಷ, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ

ಪಟ್ಟಣದ ಮಾರುತಿ ನಗರದ ಮಡಿವಾಳೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ನಡೆದ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಕ್ಷೇತ್ರದ 25 ಸಾವಿರ ಮನೆಗಳಿಗೆ ಆರಂಭದಲ್ಲಿ ನಲ್ಲಿಗಳ ಮೂಲಕ ನಿರಂತರ ನೀರು ಪೂರೈಕೆಗೆ ಚಾಲನೆ ನೀಡಲಾಗುತ್ತದೆ. ಮುದ್ದೇಬಿಹಾಳ ಪಟ್ಟಣದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೇ ವರ್ಷದಲ್ಲಿ 24 ಕೋಟಿ ರೂಪಾಯಿ ಅನುದಾನ ದೊರೆತಿದೆ. ಇನ್ನೂ 20 ಕೋಟಿ ರೂಪಾಯಿಗಳನ್ನು ಪಟ್ಟಣದ ಅಭಿವೃದ್ಧಿಗೆ ತರಲಾಗುವುದು ಎಂದರು.

ಅಭಿವೃದ್ಧಿಗೆ ಸಹಕಾರ ನೀಡಲು ಮನವಿ:

ಮತಕ್ಷೇತ್ರದಲ್ಲಿ ರಸ್ತೆ ನಿರ್ಮಾಣ ಮಾಡಲಿದ್ದು, ಸಣ್ಣಪುಟ್ಟ ಅತಿಕ್ರಮಣಗಳನ್ನು ತೆರವುಗೊಳಿಸಿ, ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.

ಪುರಸಭೆ ಮಾಜಿ ಸದಸ್ಯ ಮನೋಹರ ತುಪ್ಪದ ವಿವಿಧ ಬೇಡಿಕೆಗಳ ಕುರಿತು ಮನವಿ ಪತ್ರ ಸಲ್ಲಿಸಿದರು. ಇಟಗಿ ಮೇಲುಗದ್ದುಗೆ ಮಠದ ಗುರುಶಾಂತವೀರ ಶಿವಾಚಾರ್ಯರು, ಯಲ್ಲಾಲಿಂಗ ಸ್ವಾಮಿಗಳು, ಶಾಸಕರ ಪತ್ನಿ ಮಹಾದೇವಿ ಪಾಟೀಲ ನಡಹಳ್ಳಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀಬಾಯಿ ಹವಾಲ್ದಾರ, ಮುಖಂಡ ಶಿವಶಂಕರಗೌಡ ಹಿರೇಗೌಡರ, ಬಿಜೆಪಿ ಮಂಡಲ ಅಧ್ಯಕ್ಷ ಪರಶುರಾಮ ಪವಾರ, ಪುರಸಭೆ ಸದಸ್ಯರಾದ ಸದಾಶಿವ ಮಾಗಿ, ಚನ್ನಪ್ಪ ಕಂಠಿ,ಬಸವ ವಿದ್ಯಾಪ್ರಸಾರಕ ಸಮಿತಿ ಅಧ್ಯಕ್ಷ ಬಸವರಾಜ ಸುಕಾಲಿ, ಸಂಗಮೇಶ ಶಿವಣಗಿ ಇದ್ದರು.

ABOUT THE AUTHOR

...view details