ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ ಸಾವು - A bike rider dead in accident in Vijayapura news

ವೇಗವಾಗಿ ಸಂಚರಿಸುತ್ತಿದ್ದ ಲಾರಿ ಓವರ್ ಟೇಕ್ ಮಾಡಲು ಹೋದ ಬೈಕ್ ಸವಾರ ಲಾರಿ ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ..

ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ ಸಾವು
ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ ಸಾವು

By

Published : Jul 19, 2020, 10:11 PM IST

ವಿಜಯಪುರ: ಲಾರಿ-ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಓವರ್‌ ಟೇಕ್ ಮಾಡಲು ಹೋಗಿ ಬೈಕ್ ಸವಾರ ಸಾವೀಗಿಡಾಗಿದ್ದಾನೆ. ಜಿಲ್ಲೆಯ ನಿಡಗುಂದಿ ತಾಲೂಕಿನ ಯಲಗೂರು ಕ್ರಾಸ್ ಬಳಿ ರಾತ್ರಿ ಈ ಘಟನೆ ನಡೆದಿದೆ. ವೇಗವಾಗಿ ಸಂಚರಿಸುತ್ತಿದ್ದ ಲಾರಿ ಓವರ್ ಟೇಕ್ ಮಾಡಲು ಹೋದ ಬೈಕ್ ಸವಾರ ಲಾರಿ ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಬಾಗಲಕೋಟೆ ಜಿಲ್ಲೆಯ‌ ಹುನಗುಂದ ಮೂಲದ ಬೈಕ್ ಸವಾರ ಸಾವಿಗೀಡಾಗಿದ್ದಾನೆ. ಆತನ ಹೆಸರು ತಿಳಿದು ಬಂದಿಲ್ಲ. ಈ ಕುರಿತು ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details