ವಿಜಯಪುರ: ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಇಬ್ಬರು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ತಿಕೋಟಾ ಪಟ್ಟಣದ ಐಬಿ ಎದುರು ಸಂಭವಿಸಿದೆ.
ಅಲಿಯಾಬಾದ್ ನಿವಾಸಿ ಸುರೇಶ (30), ವಿಜಯಪುರ ನಗರ ನಿವಾಸಿ ಭೀಮಪ್ಪ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಎರಡು ವಾಹನಗಳ ಅತೀ ವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಹಾಫ್ ಲಾಕ್ಡೌನ್ಗೆ ತಜ್ಞರ ಶಿಫಾರಸು: ಪ್ರವಾಸೋದ್ಯಮ, ಸಭೆ-ಸಮಾರಂಭಗಳಿಗೆ ಮಿತಿ ಹೇರಲು ಸಲಹೆ!
ಸುರೇಶ ಅವರು ಸ್ಥಳದಲ್ಲಿಯೇ ಮೃತಪಟ್ಟರೇ, ಭೀಮಪ್ಪ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ತಿಕೋಟಾ ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.