ಮುದ್ದೇಬಿಹಾಳ: ಕೋವಿಡ್-19 ಸಂದರ್ಭದಲ್ಲಿ ಸರ್ಕಾರ ಘೋಷಿಸಿದ್ದ ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಒಳಗಾಗಿ ತಮ್ಮ ಗ್ರಾಮಗಳಿಗೆ ವಾಪಸಾಗಿರುವ ಭೂ ರಹಿತ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ಗಳನ್ನು ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ವಿತರಿಸಿದರು.
ಭೂ ರಹಿತ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಿಸಿದ ಶಾಸಕ ನಡಹಳ್ಳಿ - Job card distribution in muddebihala
ಮುದ್ದೇಬಿಹಾಳ ತಾಲೂಕಿನ ಹಡಲಗೇರಿಯಲ್ಲಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ವಲಸೆ ಕಾರ್ಮಿಕರಿಗೆ ಜಾಬ್ ಕಾರ್ಡ್ಗಳನ್ನು ವಿತರಿಸಿದರು.
Nadalli
ತಾಲೂಕಿನ ಯರಝರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಹಡಲಗೇರಿ ಗ್ರಾಮ ಪಂಚಾಯತ್ ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ ಕಾರ್ಡ್ ನೀಡಿ, ಸ್ವಾವಲಂಬನೆಯ ಜೀವನ ನಡೆಸುವಂತೆ ಸಲಹೆ ನೀಡಿದರು.
ಉದ್ಯೋಗವಿಲ್ಲದೆ ಖಾಲಿ ಕೂಳಿತಿದ್ದೇವೆ ಎಂಬ ಭಾವನೆ ಭೂ ರಹಿತ ಕೂಲಿ ಕಾರ್ಮಿಕರಿಗೆ ಬರಬಾರದು ಎಂಬ ಉದ್ದೇಶದಿಂದ ಎಲ್ಲಾ ಗ್ರಾಪಂಗಳ ವ್ಯಾಪ್ತಿಯಲ್ಲಿ ವಲಸೆ ಹೋಗಿದ್ದ ಭೂ ರಹಿತ ಕೂಲಿ ಕಾರ್ಮಿಕರಿಗೆ ಕೆಲಸ ಕೊಡುವ ಕಾರ್ಯವನ್ನು ಆರಂಭಿಸಲಾಗಿದೆ ಎಂದು ನಡಹಳ್ಳಿ ಹೇಳಿದರು.