ವಿಜಯಪುರ:ಸಹೋದರನೋರ್ವ ಚಾಕುವಿನಿಂದ ಚುಚ್ಚಿ ತನ್ನ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಣೂರು ತಾಂಡಾದಲ್ಲಿ ನಡೆದಿದೆ. ಕುಡಿದು ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.
ಹಣಮಂತ ರಾಠೋಡ ಕೊಲೆ ಮಾಡಿದ ವ್ಯಕ್ತಿ. ಅರ್ಜುನ ರಾಠೋಡ(38) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ತಂದೆಯ ಜೊತೆ ಹಣಮಂತ ಗಲಾಟೆ ಮಾಡುತ್ತಿದ್ದ. ಈ ವೇಳೆ ಜಗಳ ಬಿಡಿಸಲು ಹೋದ ಅರ್ಜುನ್ಗೆ ಹಣಮಂತ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಅರ್ಜುನ್ ಮೃತಪಟ್ಟಿದ್ದಾನೆ.