ವಿಜಯಪುರ: ಸಿಗರೇಟ್ ಹೊಗೆ ಬಿಟ್ಟಿದ್ದಕ್ಕೆ ವ್ಯಕ್ತಿ ಮೇಲೆ ಒಬ್ಬ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿರುವ ಭೀಕರ ಘಟನೆ ವಿಜಯಪುರ ತಾಲೂಕಿನ ಕನ್ನೂರ ಗ್ರಾಮದಲ್ಲಿ ನಡೆದಿದೆ.
ಸಿಗರೇಟ್ ಹೊಗೆ ಬಿಟ್ಟಿದ್ದಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ: ವಿಡಿಯೋ ವೈರಲ್ - Vijayapura man attack
ವಿಜಯಪುರ ತಾಲೂಕಿನ ಕನ್ನೂರ ಗ್ರಾಮದಲ್ಲಿ ಸಿಗರೇಟ್ ಸೇದಿ ಹೊಗೆ ಬಿಟ್ಟ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೈರಲ್ ವಿಡಿಯೋ
ಮಲ್ಲಪ್ಪ ಬೆಳ್ಳುಂಡ ಹಲ್ಲೆಗೊಳಗಾದ ವ್ಯಕ್ತಿ. ಕಳೆದ ಆಗಷ್ಟ್ 3 ರಂದು ಘಟನೆ ನಡೆದಿದ್ದು, ರವಿ ಪಾನ್‌ಶಾಪ್ ಎದುರಿನ ಅಂಗಡಿಯ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಮನವಿಗೆ ಸಿಗದ ಸ್ಪಂದನೆ: ಎರಡೇ ತಿಂಗಳಲ್ಲಿ ಮರ ಬಿದ್ದು ಮಹಿಳೆಯರು ಸಾವು.. ವಿಡಿಯೋ ವೈರಲ್