ವಿಜಯಪುರ:ಚಾಕುವಿನಿಂದ ಇರಿದುಕೊಂಡು ಸೆಕ್ಯುರಿಟಿ ಗಾರ್ಡ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮುದ್ದೇಬಿಹಾಳ ಪಟ್ಟಣದ ಎಸ್ಬಿಐ ಬ್ಯಾಂಕ್ನಲ್ಲಿ ನಡೆದಿದೆ.
ಮುದ್ದೇಬಿಹಾಳದಲ್ಲಿ ಬ್ಯಾಂಕ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಸೆಕ್ಯುರಿಟಿ ಗಾರ್ಡ್ - ಇತ್ತೀಚಿನ ವಿಜಯಪುರ ಸುದ್ದಿ
ಚಾಕುವಿನಿಂದ ಇರಿದುಕೊಂಡು ಸೆಕ್ಯುರಿಟಿ ಗಾರ್ಡ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮುದ್ದೇಬಿಹಾಳ ಪಟ್ಟಣದ ಎಸ್ಬಿಐ ಬ್ಯಾಂಕ್ನಲ್ಲಿ ನಡೆದಿದೆ.
ಸ್ವತಃ ಚಾಕುವಿನಿಂದ ಇರಿದುಕೊಂಡು ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ ಯತ್ನ
ಬೆಳಗಾವಿ ಜಿಲ್ಲೆಯ ಸಂಕೇಶ್ವರ ಮೂಲದ ರಮಜಾನ್ ಬಡಾವಾಲೆ (48) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಬೆಳಗ್ಗೆ ಏಳು ಗಂಟೆ ಸುಮಾರಿಗೆ ಬ್ಯಾಂಕ್ ಒಳಗಡೆಯೇ ಚಾಕುವಿನಿಂದ ಇರಿದುಕೊಂಡಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತೀವ್ರ ರಕ್ತಸ್ರಾವದಿಂದ ಬಳಲಿರುವ ಸೆಕ್ಯುರಿಟಿ ಗಾರ್ಡ್ನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆ ಯತ್ನ ಹಿನ್ನೆಲೆ ಎಸ್ಬಿಐ ಬ್ಯಾಂಕ್ ಸೇವೆ ತಾತ್ಕಾಲಿಕ ಸ್ಥಗಿತ ಮಾಡಲಾಗಿದೆ. ಸದ್ಯ ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.