ಕರ್ನಾಟಕ

karnataka

ETV Bharat / state

ವಿಜಯಪುರ ಜಿಲ್ಲೆಯ ಜಲಸಂರಕ್ಷಣ ಕ್ರಮಗಳ ಕುರಿತು ಕೇಂದ್ರ ತಂಡದಿಂದ ವಸ್ತುಸ್ಥಿತಿ ಅಧ್ಯಯನ - undefined

ಕೃಷಿ, ತೋಟಗಾರಿಕೆ, ಜಲಾನಯನ ಇಲಾಖೆ ಸೇರಿದಂತೆ ಜಿಲ್ಲೆಯ ಮತ್ತು ಇಂಡಿ ತಾಲೂಕಿನ ಬರ ಪರಿಸ್ಥಿತಿ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಜಯಪುರದಲ್ಲಿ ಸಭೆ ನಡೆಯಿತು.

ವಿಜಯಪುರದಲ್ಲಿ ಕೇಂದ್ರ ನೊಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

By

Published : Jul 18, 2019, 10:38 AM IST

ವಿಜಯಪುರ: ಜಿಲ್ಲೆಯಲ್ಲಿನ ನೀರಿನ ಕೊರತೆ ಹಾಗೂ ಜಲಸಂರಕ್ಷಣಾ ಕ್ರಮಗಳ ಕುರಿತು ವಸ್ತುಸ್ಥಿತಿ ಅಧ್ಯಯನ ನಡೆಸಲಾಗುತ್ತಿದೆ ಎಂದು ಭಾರತ ಸರ್ಕಾರದ ವಾಣಿಜ್ಯ ಇಲಾಖೆಯ ಆರ್ಥಿಕ ಸಲಹೆಗಾರರು ಹಾಗೂ ಜಲಶಕ್ತಿ ಅಭಿಯಾನದ ಕೇಂದ್ರದ ನೋಡಲ್ ಅಧಿಕಾರಿ ಅಜಯ ಶ್ರೀವಾತ್ಸವ ಹೇಳಿದರು.

ವಿಜಯಪುರದಲ್ಲಿ ಕೇಂದ್ರ ನೊಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

ನಗರದ ನೂತನ ಪ್ರವಾಸಿ ಮಂದಿರದಲ್ಲಿ ಕೃಷಿ, ತೋಟಗಾರಿಕೆ, ಜಲಾನಯನ ಇಲಾಖೆ ಸೇರಿದಂತೆ ಜಿಲ್ಲೆಯ ಮತ್ತು ಇಂಡಿ ತಾಲೂಕಿನ ಬರ ಪರಿಸ್ಥಿತಿ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ತೀವ್ರ ಬರವಿದ್ದು, ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದರು.

ಬರ ಪರಿಸ್ಥಿತಿ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ಕೇಂದ್ರವು ಜಲಶಕ್ತಿ ಸಚಿವಾಲಯದ ಅಡಿ ಜಂಟಿ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳು ತಾಂತ್ರಿಕ ಸಲಹೆಗಾರರು ಸೇರಿದಂತೆ 250 ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ಒಟ್ಟಾರೆ ನೀರಿನ ಕೊರತೆ, ಜಲಸಂರಕ್ಷಣೆ ಹಾಗೂ ನಿರ್ವಹಣೆ ಕುರಿತು ಅಧ್ಯಯನ ನಡೆಸುತ್ತಿದ್ದು, ಪ್ರಸ್ತುತ ಜಾರಿಯಲ್ಲಿರುವ ನೀರಿಗೆ ಸಂಬಂಧಪಟ್ಟಂತಹ ಯೋಜನೆಗಳಿಗೆ ಪ್ರೋತ್ಸಾಹ ನೀಡುವುದೇ ಜಲಶಕ್ತಿ ಅಭಿಯಾನದ ಉದ್ದೇಶವಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್​ ಮಾತನಾಡಿ, ಜಿಲ್ಲೆಯಲ್ಲಿ ಬರ ನಿರ್ವಹಣಾ ಚಟುವಟಿಕೆಗಳು ಹಾಗೂ ತೀವ್ರ ಬರ ಎದುರಿಸುತ್ತಿರುವ ಇಂಡಿ ತಾಲೂಕಿನ ಬರ ಪರಿಸ್ಥಿತಿ, ಕೈಗೊಳ್ಳಲಾಗುತ್ತಿರುವ ಬರ ನಿರ್ವಹಣಾ ಕ್ರಮಗಳ ಬಗ್ಗೆ ವಿವರಿಸಿದರು. ಅದರಂತೆ ಕೃಷ್ಣಾ ನದಿಯ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಸೀಮಿತವಾಗಿ ಜಿಲ್ಲೆಯ ಪ್ರತಿ ಮನೆಗೆ ಪೈಪಲೈನ್ ಮೂಲಕ ನೀರು ಸರಬರಾಜು ಮಾಡುವ ಜಲಧಾರೆ ಯೋಜನೆ ಜಾರಿಗೊಂಡಲ್ಲಿ ಬಹುತೇಕ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸಾಧ್ಯವಿದೆ. ಈ ಯೋಜನೆ ಜಾರಿಗೊಳಿಸಲು ಜನಪ್ರತಿನಿಧಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂಬರುವ ವರ್ಷಗಳಲ್ಲಿ ಈ ಯೋಜನೆ ಜಾರಿಗೊಳ್ಳಲಿದೆ ಎಂದರು.

ಜಿಲ್ಲೆಯ ವಿವಿಧ ಪ್ರದೇಶಗಳಿಗೆ ನೋಡಲ್ ಅಧಿಕಾರಿಗಳ ಭೇಟಿ :ಜಿಲ್ಲೆಯ ಅಥರ್ಗಾ, ತಡವಲಗಾ, ಗಣವಲಗಾ, ರೂಗಿ, ಬಬಲಾದ, ಹಳಗುಣಕಿ ಗ್ರಾಮಗಳಿಗೆ ಭೇಟಿ ನೀಡಿದ ಭಾರತ ಸರ್ಕಾರದ ವಾಣಿಜ್ಯ ಇಲಾಖೆಯ ಆರ್ಥಿಕ ಸಲಹೆಗಾರರು ಹಾಗೂ ಜಲಶಕ್ತಿ ಅಭಿಯಾನದ ಕೇಂದ್ರ ನೋಡಲ್ ಅಧಿಕಾರಿಗಳಾದ ಅಜಯ ಶ್ರೀವಾತ್ಸವ ಅವರು ಅಲ್ಲಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

For All Latest Updates

TAGGED:

ABOUT THE AUTHOR

...view details