ಕರ್ನಾಟಕ

karnataka

ETV Bharat / state

ಡ್ರಗ್ಸ್ ಮಾಫಿಯಾ ವಿರುದ್ಧ ಎಬಿವಿಪಿ ಸಹಿ ಸಂಗ್ರಹ - ವಿಜಯಪುರ ಸುದ್ದಿ

ಸ್ಯಾಂಡಲ್‌ವುಡ್‌ನಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಸಹಿ ಸಂಗ್ರಹಿಸಿ, ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಸರ್ಕಾರ ಅವರಿಗೆ ತಕ್ಕ ಪಾಠ ಕಲಿಸಲು ಮುಂದಾಗುವಂತೆ ಆಗ್ರಹಿಸಿದರು.

ಸ್ಯಾಂಡಲ್‌ವುಡ್‌ ಡ್ರಗ್ಸ್ ಮಾಫಿಯಾ ವಿರುದ್ಧ ಎಬಿವಿಪಿ ಸಹಿ ಸಂಗ್ರಹ
ಸ್ಯಾಂಡಲ್‌ವುಡ್‌ ಡ್ರಗ್ಸ್ ಮಾಫಿಯಾ ವಿರುದ್ಧ ಎಬಿವಿಪಿ ಸಹಿ ಸಂಗ್ರಹ

By

Published : Sep 9, 2020, 3:24 PM IST

ವಿಜಯಪುರ:ಸ್ಯಾಂಡಲ್‌ವುಡ್‌ನಲ್ಲಿ ಕೇಳಿ ಬಂದಿರುವ ಡ್ರಗ್ಸ್ ಮಾಫಿಯಾ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ನಗರದಲ್ಲಿ ಸಹಿ ಸಂಗ್ರಹ ಮಾಡಿದರು.

ನಗರದ ಸಿದ್ದೇಶ್ವರ ಮಂದಿರ ಮುಂಭಾಗದಲ್ಲಿ ಎಬಿವಿಪಿ ಕಾರ್ಯಕರ್ತರು ಸಹಿ ಸಂಗ್ರಹಿಸುವ ಮೂಲಕ ಡ್ರಗ್ಸ್ ದಂಧೆ ಹಿಂದೆ ಹಲವು ಕಾಣದ ಕೈಗಳು ಕೆಲಸ ಮಾಡುತ್ತಿವೆ. ವ್ಯಸನಿಗಳಿಗೆ ದಾರಿ ಮಾಡಿಕೊಟ್ಟು ಯುವ ಸಮೂಹದ ದಾರಿ ತಪ್ಪಿಸಿ ರಾಷ್ಟ್ರದ್ರೋಹ ನಡೆಸುವ ಕಾರ್ಯಕ್ಕೆ ಮುಂದಾಗಿವೆ ಎಂದು ಎಬಿವಿಪಿ ಕಾರ್ಯಕರ್ತರು ಕಿಡಿಕಾರಿದರು. ಇತ್ತ ಡ್ರಗ್ಸ್ ದಂಧೆಯಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ಧ ದೇಶದ್ರೋಹಿ ಪ್ರಕರಣ ದಾಖಲಿಸಿ ಎಂದು ಒತ್ತಾಯಿಸಿದರು.

ಸ್ಯಾಂಡಲ್‌ವುಡ್‌ ಡ್ರಗ್ಸ್ ಮಾಫಿಯಾ ವಿರುದ್ಧ ಎಬಿವಿಪಿ ಸಹಿ ಸಂಗ್ರಹ

ಚಿತ್ರರಂಗ ಹಾಗೂ ಇತರೆ ವಲಯದಲ್ಲಿರುವ ವ್ಯಕ್ತಿಗಳ ಮೇಲೆ ಹಾಗೂ ನಟ-ನಟಿಯರ ವಿರುದ್ಧ ಕ್ರಮಕ್ಕೆ ಮುಂದಾಗುವಂತೆ ಆಗ್ರಹಿಸಿದರು. ಕಲೆಯ ಮೂಲಕ‌ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನಿಸಬೇಕಾದ ಸೆಲೆಬ್ರಿಟಿಗಳು ಇಂದು ಮಾದಕ ವಸ್ತುಗಳ ಸೇವನೆ ಮಾಡುತ್ತಿದ್ದಾರೆ ಎಂಬುದು ಇತರೆ ಜನರಿಗೆ ಮುಜಗುರ ಉಂಟು ಮಾಡುವಂತಾಗಿದೆ. ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಸರ್ಕಾರ ಅವರಿಗೆ ತಕ್ಕ ಪಾಠ ಕಲಿಸಲು ಮುಂದಾಗುವಂತೆ ಆಗ್ರಹಿಸಿ ಸಹಿ ಸಂಗ್ರಹಿಸಿದರು.

ABOUT THE AUTHOR

...view details