ವಿಜಯಪುರ:ನಗರದ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ ಮೇಲೆ ಎಸಿಬಿ ದಾಳಿ - ವಿಜಯಪುರ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ
ವಿಜಯಪುರ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶ ಪಡಿಸಿಕೊಂಡಿದ್ದಾರೆ.
Vijayapura
ಬಾಗಲಕೋಟೆಯ ಮುಖ್ಯಸ್ಥರಾಗಿರುವ ಗೋಪಾಲ ಮಾಲಗತ್ತಿ ವಿಜಯಪುರ ಕಚೇರಿಯ ಪ್ರಭಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಏಕಕಾಲಕ್ಕೆ ಎಸಿಬಿ ಅಧಿಕಾರಿಗಳು ಎರಡು ಜಿಲ್ಲಾ ಕೇಂದ್ರ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ.
ಎಸಿಬಿ ಅಧಿಕಾರಿಗಳು ಕಚೇರಿಯಲ್ಲಿ ದಾಖಲಾತಿ ಪರಿಶೀಲನೆ ನಡೆಸಿದರು. ಈ ವೇಳೆ ಕೆಲ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.