ವಿಜಯಪುರ:ಟಾಟಾ ಏಸ್ ವಾಹನ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕಂದಗನೂರ ಬಳಿ ನಡೆದಿದೆ.
ಟಾಟಾ ಏಸ್ ವಾಹನ ಪಲ್ಟಿ: ಅಂತ್ಯಕ್ರಿಯೆಗೆ ಹೋದವರು ಮಸಣ ಸೇರಿದರು!
ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ತೆರಳಿ ವಾಪಸಾಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿದ್ದು, ಐವರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಟಾಟಾ ಏಸ್ ವಾಹನ ಪಲ್ಟಿ
ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ತೆರಳಿ ವಾಪಸು ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಹಳದೂರು ಗ್ರಾಮದ ಗ್ರಾಮಸ್ಥರು ಸಂಬಂಧಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಭಾಗಿಯಲು ಹೋಗಿದ್ದರು ಎನ್ನಲಾಗಿದೆ. ಈ ವೇಳೆ ವಾಹನದಲ್ಲಿದ್ದ ಇಬ್ಬರು ಮಹಿಳೆಯರು, ಮೂವರು ಪುರುಷರು ಸೇರಿ ಐವರು ಮೃತಪಟ್ಟಿದ್ದಾರೆ.
ಸದ್ಯ ಗಾಯಾಳುಗಳಿಗೆ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಮುದ್ದೇಬಿಹಾಳ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
Last Updated : May 18, 2019, 4:46 PM IST