ಕರ್ನಾಟಕ

karnataka

ETV Bharat / state

ಕಾರು, ಬೈಕ್​ ಮಧ್ಯೆ​​ ಡಿಕ್ಕಿ: ಪೌರ ಕಾರ್ಮಿಕ ಸ್ಥಳದಲ್ಲೇ ಸಾವು - undefined

ಕಾರು ಹಾಗೂ ಬೈಕ್​ ನಡುವೆ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಘಟನೆಯ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ.

ಕಾರು ಚಾಲಕ ಪರಾರಿ

By

Published : Jun 9, 2019, 6:33 PM IST

ವಿಜಯಪುರ: ಬೈಕ್-ಕಾರು ನಡುವೆ ಡಿಕ್ಕಿ ಸಂಭವಿಸಿ ಪೌರ ಕಾರ್ಮಿಕನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಲ್ಹಾರದ ರಾಷ್ಟ್ರೀಯ ಹೆದ್ದಾರಿ 218 ರ ಯುಕೆಪಿ ಕ್ಯಾಂಪ್ ಬಳಿ ನಡೆದಿದೆ.

ಅಶೋಕ ಸಂದಿಮನಿ ಮೃತ ಬೈಕ್​​ ಸವಾರ. ಈತ ಕೊಲ್ಹಾರ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿ 218 ರ ಪಕ್ಕದಲ್ಲಿನ ಸರ್ವಿಸ್​​ ರಸ್ತೆಯಲ್ಲಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದಲ್ಲಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸದ್ಯ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀ ಸರು ಕಾರು ಚಾಲಕನಿಗೆ ಬಲೆ ಬೀಸಿದ್ದಾರೆ.

For All Latest Updates

TAGGED:

ABOUT THE AUTHOR

...view details