ವಿಜಯಪುರ: ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ.
ನಿಡಗುಂದಿ ಬಳಿ ಭೀಕರ ಅಪಘಾತ... ಮೂವರ ದುರ್ಮರಣ - vijayapura nidagundi accident
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಬಳಿ ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
![ನಿಡಗುಂದಿ ಬಳಿ ಭೀಕರ ಅಪಘಾತ... ಮೂವರ ದುರ್ಮರಣ Accident near nidagundi:, ನಿಡಗುಂದಿ ಬಳಿ ಭೀಕರ ಅಪಘಾತ](https://etvbharatimages.akamaized.net/etvbharat/prod-images/768-512-6010916-thumbnail-3x2-police.jpg)
ನಿಡಗುಂದಿ ಬಳಿ ಭೀಕರ ಅಪಘಾತ
ನಿಡಗುಂದಿ ಬಳಿ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರ ದುರ್ಮರಣ
ಮೃತರನ್ನು ಹೊಸಪೇಟೆ ಮೂಲದ ರಾಜೇಶ್ (32), ಏಸುದಾಸ್ (32) ಹಾಗೂ ಭುಜಂಗರಾವ್ (38) ಮೃತರೆಂದು ಗುರುತಿಸಲಾಗಿದೆ. ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹೊಸಪೇಟೆಯಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಘಟನೆ ಬಳಿಕ ಲಾರಿ ಬಿಟ್ಟು ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಕೂಡಗಿ ಎನ್ಟಿಪಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ ಸ್ಥಳದಲ್ಲಿ ಮೇಲ್ಸೇತುವೆ ನಿರ್ಮಿಸುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಹೆದ್ದಾರಿ ತಡೆ ನಡೆಸಿದ ಕಾರಣ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.