ಕರ್ನಾಟಕ

karnataka

ETV Bharat / state

ಸೋಂಕಿತ ಕೇಂದ್ರಗಳ ಸ್ಯಾನಿಟೈಸೇಶನ್​​ಗೆ ಕ್ರಮ : ಡಿಸಿ ವೈ.ಎಸ್. ಪಾಟೀಲ - District Collector YS Patila

ವಿಜಯಪುರ ಜಿಲ್ಲೆಯಲ್ಲಿ ಪೊಲೀಸ್, ವಾಟರ್ ಬೋರ್ಡ್ ಹಾಗೂ ಆರೋಗ್ಯ ಕಾರ್ಯಕರ್ತರಿಗೂ ಕೋವಿಡ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಆಯಾ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸೂಕ್ತ ಸ್ಯಾನಿಟೈಸ್​ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ.

District Collector YS Patila
ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

By

Published : Jul 13, 2020, 12:16 AM IST

ವಿಜಯಪುರ: ಜಿಲ್ಲೆಯಲ್ಲಿ ಪೊಲೀಸ್, ವಾಟರ್ ಬೋರ್ಡ್ ಹಾಗೂ ಆರೋಗ್ಯ ಕಾರ್ಯಕರ್ತರಿಗೂ ಕೋವಿಡ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಆಯಾ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸೂಕ್ತ ಸ್ಯಾನಿಟೈಸ್​‌ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.

ಜಿಲ್ಲೆಯ ಕಂಟೈನ್​ಮೆಂಟ್​ ವಲಯದಲ್ಲಿ ಕೋವಿಡ್ ಆಸ್ಪತ್ರೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಣೆ ಸಂದರ್ಭದಲ್ಲಿ ಇಂದು 14 ಜನ ಪೊಲೀಸ್ ಸಿಬ್ಬಂದಿಗೆ, ಮಹಾನಗರ ಪಾಲಿಕೆಯ 15 ಜನರಲ್ಲಿ ಹಾಗೂ ಮೂವರು ಆರೋಗ್ಯ ಕಾರ್ಯಕರ್ತರು ಹಾಗೂ ವಾಟರ್ ಬೋರ್ಡ್​ನ ಇಬ್ಬರು ಕೆಲಸಗಾರರಿಗೂ ಸೋಂಕು ತಗುಲಿದೆ ಎಂದು ಅವರು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಸಿಬ್ಬಂದಿಗಳಿಗೆ ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ 48 ಗಂಟೆಗಳ ಕಾಲ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ಸೀಲ್‌ಡೌನ್‌ಗೆ ಸಕಲ ಕ್ರಮಗಳನ್ನು ಕೈಗೊಂಡು ಸೂಕ್ತ ಸ್ಯಾನಿಟೈಸ್​ ಮಾಡಲಾಗಿದೆ. ಅದರಂತೆ ಸಂಬಂಧಪಟ್ಟ ಪೊಲೀಸ್ ಠಾಣೆ ಮತ್ತು ಕಚೇರಿಗಳಲ್ಲಿ ಪ್ರತಿದಿನ ಎರಡು ಬಾರಿ ಸ್ಯಾನಿಟೈಸ್​ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈಗ ಲಭ್ಯವಿರುವ ಕೋವಿಡ್ ಸೋಂಕಿತರ ಮಾಹಿತಿಯು ಪೋರ್ಟಲ್ ಮೂಲಕ ತಿಳಿದು ಬಂದಿದ್ದು, ನಾಳೆ ರಾಜ್ಯ ಬುಲೆಟಿನ್​ನಲ್ಲಿ ಪ್ರಕಟವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ABOUT THE AUTHOR

...view details