ಕರ್ನಾಟಕ

karnataka

ETV Bharat / state

12 ಕೋಟಿ ರೂ.ವೆಚ್ಚದಲ್ಲಿ ಗಾರ್ಡನ್ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಶಾಸಕ ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗಾರ್ಡನ್ ಅಭಿವೃದ್ಧಿಗೆ ಅಂದಾಜು 12 ಕೋಟಿ ರೂ.ಗಳ ಕೆಬಿಜೆಎನ್‌ಎಲ್ ವಿಶೇಷ ಅನುದಾನದ ಅಡಿಯಲ್ಲಿ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಆಹಾರ ಪೂರೈಕೆ ನಿಗಮದ ಅಧ್ಯಕ್ಷ, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

By

Published : Sep 15, 2020, 12:10 AM IST

muddhebihala
ಪ್ರಗತಿ ಪರಿಶೀಲನಾ ಸಭೆ

ಮುದ್ದೇಬಿಹಾಳ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ 100 ಗಾರ್ಡನ್‌ಗಳಿದ್ದು ಅದರಲ್ಲಿ 45 ಗಾರ್ಡನ್ ಅಭಿವೃದ್ಧಿಗೆ ಅಂದಾಜು 12 ಕೋಟಿ ರೂ.ಗಳ ಕೆಬಿಜೆಎನ್‌ಎಲ್ ವಿಶೇಷ ಅನುದಾನದ ಅಡಿಯಲ್ಲಿ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಆಹಾರ ಪೂರೈಕೆ ನಿಗಮದ ಅಧ್ಯಕ್ಷ, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ದಾಸೋಹ ನಿಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕೆಲ ಉದ್ಯಾನವನಗಳಲ್ಲಿ ಅನಧಿಕೃತ ಕಟ್ಟಡಗಳನ್ನು ನಿರ್ಮಿಸಿಕೊಳ್ಳಲಾಗಿದೆ. ಅವುಗಳನ್ನು ತಕ್ಷಣದಲ್ಲಿಯೇ ತೆರವುಗೊಳಿಸಿ ಉದ್ಯಾನವನ್ನು ಅಭಿವೃದ್ಧಿಗೊಳಿಸಬೇಕು ಎಂದ ಅವರು ಪಿಡಬ್ಲೂಡಿ ಎನ್.ಓ.ಸಿ ಪಡೆಯದೇ ಕಟ್ಟಡ ನಿರ್ಮಾಣಕ್ಕೆ ಅನುಮತಿ ಕೊಡಬೇಡಿ ಎಂದು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ಡಿಯುಡಿಸಿ ಎಇಇ ಆರ್.ಎಂ.ಜುಮನಾಳ ಮಾತನಾಡಿ, ಅನಧಿಕೃತ ಲೇಔಟ್ ಹಾಗೂ ಗಾರ್ಡನ್ ಜಾಗಗಳ ಅತಿಕ್ರಮಣಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಈಚೇಗೆ ನಡೆದ ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಅಲ್ಲದೇ ಜಿಲ್ಲಾಡಳಿತದಿಂದ ಬೇಕಾದ ಸಹಕಾರ ನೀಡುವುದಾಗಿಯೂ ತಿಳಿಸಿದ್ದಾರೆ ಎಂದು ಹೇಳಿದರು.

ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ

ಸದ್ಯ ತಾಲೂಕಿನಲ್ಲಿ ಭಾರಿ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಕಂದಾಯ, ಗ್ರಾಮ ಪಂಚಾಯಿತಿ, ಪಿಡಿಓಗಳು ಭೇಟಿ ನೀಡಿ ನೈಜ ಸಮೀಕ್ಷೆ ನಡೆಸಿ ತಕ್ಷಣ ವರದಿ ಸಲ್ಲಿಸಬೇಕು. ಹಾನಿಗೊಳಗಾದ ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ ಪರಿಹಾರ ದೊರಕಲು ಸಾಧ್ಯ ಎಂದರು. ಸ್ಮಶಾನ ಜಾಗಗಳನ್ನು ಗುರುತಿಸುವುದು, ಸರ್ಕಾರಿ ಜಾಗದ ಅತಿಕ್ರಮಣ ತಡೆಗಟ್ಟುವುದು, ವಿದ್ಯುತ್ ಕಂಬಗಳ ಅಳವಡಿಕೆ, ಮೀನುಗಾರಿಕೆ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಅನಿಲಕುಮಾರ ಢವಳಗಿ, ತಾಪಂ ಇಓ ಶಶಿಕಾಂತ ಶಿವಪೂರೆ, ಹೆಸ್ಕಾಂ ಎಇಇ ರಾಜಶೇಖರ ಹಾದಿಮನಿ, ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ರಾಜೇಶ್ವರಿ ನಾಡಗೌಡ, ಪುರಸಭೆ ಕಂದಾಯಾಧಿಕಾರಿ ಎಂ.ಬಿ.ಮಾಡಗಿ ಮೊದಲಾದವರು ಇದ್ದರು.

ABOUT THE AUTHOR

...view details