ವಿಜಯಪುರ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವೇಳೆ ಗಲಭೆ ನಡೆಸಿದವರ ವಿರುದ್ಧ ಕ್ರಮಕ್ಕೆ ಮುಂದಾಗುವುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪೀರನವಾಡಿ ಗಲಭೆಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಲು ಕರವೇ ಆಗ್ರಹ - ಬೆಳಗಾವಿಯ ಪೀರನವಾಡಿಯಲ್ಲಿ ಪ್ರತಿಷ್ಠಾಪನೆ
ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಬೆಳಗಾವಿಯ ಪೀರನವಾಡಿಯಲ್ಲಿ ಪ್ರತಿಷ್ಠಾಪನೆ ಮಾಡುವ ವೇಳೆ ಮರಾಠಿ ಭಾಷಿಕರು ಪುಂಡಾಟಿಕೆ ಮೆರೆದು ಚಪ್ಪಲಿ ತೂರಾಟ ನಡೆಸಿ ಕನ್ನಡಗರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಕರವೇ ಕಾರ್ಯಕರ್ತರು ಎಂಇಎಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಬೆಳಗಾವಿಯ ಪೀರನವಾಡಿಯಲ್ಲಿ ಪ್ರತಿಷ್ಠಾಪನೆ ಮಾಡುವ ವೇಳೆ ಮರಾಠಿ ಭಾಷಿಕರು ಪುಂಡಾಟಿಕೆ ಮೆರೆದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ಬಳಿಕ ಪೊಲೀಸರು ಲಾಠಿ ರುಚಿ ತೋರಿಸಲು ಮುಂದಾದಾಗ ಪುಂಡರು ಓಡಿ ಹೋಗಿದ್ದು, ಮಹಾನ್ ವ್ಯಕ್ತಿಯ ಪ್ರತಿಮೆ ನಿರ್ಮಾಣಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಕರವೇ ಕಾರ್ಯಕರ್ತರು ಕಿಡಿಕಾರಿದರು.
ಗಲಭೆಗೆ ಕಾರಣವಾದ ವ್ಯಕ್ತಿಗಳ ವಿರುದ್ಧ ಬೆಳಗಾವಿ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಬೇಕು. ಜೊತೆಗೆ ಚಪ್ಪಲಿ ತೂರಾಟ ನಡೆಸಿವವರ ವಿರುದ್ಧ ಕ್ರಮ ಜರುಗಿಸುವಂತೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.