ಕರ್ನಾಟಕ

karnataka

ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶ ಸರ್ಕಾರ ವಜಾಗೊಳಿಸುವಂತೆ ಆಗ್ರಹಿಸಿ ಡಿಎಸ್​ಎಸ್​ ಪ್ರತಿಭಟನೆ

By

Published : Oct 13, 2020, 7:11 PM IST

ಉತ್ತರಪ್ರದೇಶದಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಹಾಗೂ ಯುವತಿಯ ರಕ್ಷಣೆ ನೀಡಲು ವಿಫಲವಾದ ಉತ್ತರಪ್ರದೇಶ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Dalit Conflict Committee protest
ಪ್ರತಿಭಟನೆ

ವಿಜಯಪುರ: ಉತ್ತರಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಹಾಗೂ ಯುವತಿಯ ರಕ್ಷಣೆ ನೀಡಲು ವಿಫಲವಾದ ಉತ್ತರಪ್ರದೇಶ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಯುಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಸಿಎಂ ಯೋಗಿ ಆದಿತ್ಯನಾಥ ಸರ್ಕಾರ ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿದೆ. ಅಲ್ಲದೆ ದಲಿತ ಯುವತಿಯ ಮೇಲೆ ಅತ್ಯಾಚಾರವೆಸಗಿ ಚಿತ್ರಹಿಂಸೆ ನೀಡಿದರು. ಅಲ್ಲಿನ ಸರ್ಕಾರ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿಲ್ಲ. ಉತ್ತರಪ್ರದೇಶದ ಸರ್ಕಾರ ಮಹಿಳೆಯರ ಸ್ವಾತಂತ್ರ್ಯ ಮತ್ತು ಹಕ್ಕುಗಳನ್ನು ಬಲತ್ಕಾರದಿಂದ ಕಸಿದುಕೊಂಡಿದೆ ಎಂದು ಆರೋಪಿಸಿದರು.

ಕಳೆದ ಹಲವು ದಿನಗಳಿಂದ ಯುಪಿಯಲ್ಲಿ ಹೆಚ್ಚು ಅತ್ಯಾಚಾರ ಪ್ರಕರಣಗಳು ನಡೆದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಸರ್ಕಾರವನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಡಿಎಸ್ಎಸ್ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details