ವಿಜಯಪುರ: ಆದಿವಾಸಿ ಹರಣಶಿಕಾರಿ ಸಮುದಾಯದವರಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮೂಲಸೌಲಭ್ಯ ಒದಗಿಸುವಂತೆ ಆದಿವಾಸಿಗಳ ಪ್ರತಿಭಟನೆ - Protest in Vijayapura
ಆದಿವಾಸಿ ಹರಣಶಿಕಾರಿ ಸಮುದಾಯದವರಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಆದಿವಾಸಿಗಳ ಪ್ರತಿಭಟನೆ
ನಗರದ ಅಂಬೇಡ್ಕರ್ ವೃತ್ತದಿಂದ ಪಾದಯಾತ್ರೆ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಆದಿವಾಸಿಗಳಿಗೆ ಮನೆ ನಿರ್ಮಾಣ, ಯುವಕರಿಗೆ ಉದ್ಯೋಗ, ಮಕ್ಕಳಿಗೆ ವಸತಿ ಶಾಲೆ ಸೇರಿದಂತೆ ಮೂಲ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಶೀಘ್ರವಾಗಿ ಈ ಕುರಿತು ಸ್ಪಂದಿಸುವುದಾಗಿ ಭರವಸೆ ನೀಡಿದರು.