ವಿಜಯಪುರ: ಇಲಾಖೆಯಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಿಸುಂತೆ ಕೃಷಿ ಇಲಾಖೆ ಸಿಬ್ಬಂದಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟಿಸಿದರು.
ವಿಜಯಪುರ: ಕೃಷಿ ಇಲಾಖೆಯಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಿಸುವಂತೆ ಆಗ್ರಹಿಸಿ ಪ್ರತಿಭಟನೆ - ವಿಜಯಪುರ ಪ್ರತಿಭಟನೆ ಸುದ್ದಿ
ಇಲಾಖೆಯಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಿಸುಂತೆ ಕೃಷಿ ಇಲಾಖೆ ಸಿಬ್ಬಂದಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿತು. ಅಲ್ಲದೇ ತಕ್ಷಣವೇ ನೌಕರರಿಗೆ ಆಗುತ್ತಿರುವ ತೊಂದರೆ ತಡೆಯುವಂತೆ ಸರ್ಕಾರದ ಗಮನಕ್ಕೆ ತರುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಸಿಬ್ಬಂದಿ ಮನವಿ ಸಲ್ಲಿಸಿದರು.
ಕಳೆದ ಹಲವು ವರ್ಷಗಳಿಂದ ಇಲಾಖೆಯಲ್ಲಿ ಯಾವುದೇ ಸಿಬ್ಬಂದಿ ಸರ್ಕಾರ ನೇಮಿಸಿಲ್ಲ. ಕೃಷಿ ಇಲಾಖೆಯಲ್ಲಿ ಸರ್ಕಾರ ಹಲವು ಯೋಜನೆ ಜಾರಿ ಮಾಡಿದ್ದು, ಕಳೆದ ಹಲವು ವರ್ಷಗಳಿಂದ ಇಲಾಖೆ ಸಿಬ್ಬಂದಿಗೆ ಕಷ್ಟವಾಗುತ್ತಿದೆ. ಕೆಲಸದ ಒತ್ತಡ ಹೆಚ್ಚಾಗಿದ್ದರಿಂದ ಮಾನಸಿಕ ಖಿನ್ನತೆಗೆ ಒಳಗಾಗುವ ಪರಿಸ್ಥಿತಿಯಿದೆ. ಇನ್ನೂ ಕೃಷಿ ರಂಗದ ಎಲ್ಲ ಕೆಲಸಗಳು ಒಂದೇ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ನೋಡಿಕೊಳ್ಳುವ ಕಾರಣ ಅಧಿಕಾರಿಗಳು ತೊಂದರೆ ಅನುಭವಿಸವಂತಾಗಿದೆ ಎಂದು ಕೃಷಿ ಇಲಾಖೆ ಸಿಬ್ಬಂದಿ ಕಿಡಿ ಕಾರಿದರು.
ತಕ್ಷಣವೇ ನೌಕರರಿಗೆ ಆಗುತ್ತಿರುವ ತೊಂದರೆ ತಡೆಯುವಂತೆ ಸರ್ಕಾರದ ಗಮನಕ್ಕೆ ತರುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.