ಕರ್ನಾಟಕ

karnataka

ETV Bharat / state

‘ಮಹಾ’ ಮಳೆಗೆ ಕೃಷ್ಣಾ ನದಿ ಪ್ರವಾಹ.. ಕೃಷಿ ಭೂಮಿಗೆ ನೀರು ನುಗ್ಗಿ ಬೆಳೆ ಹಾನಿ - ಕೃಷ್ಣಾ ನದಿ ಪ್ರವಾಹ

ರಾಜ್ಯದಲ್ಲಿ ಮಳೆಯಾರ್ಭಟ ಕಡಿಮೆಯಾಗಿದ್ದು ಮಹಾರಾಷ್ಟ್ರ ಭಾಗದಲ್ಲಿ ಸುರಿಯುತ್ತಿರುವ ಮಳೆ ರಾಜ್ಯದಲ್ಲಿ ಪ್ರವಾಹ ಸೃಷ್ಟಿಸಿದೆ. ಉಜನಿ ಜಲಾಶಯದಿಂದ ನೀರು ಹೊರಬಿಡಲಾಗುತ್ತಿರುವ ಪರಿಣಾಮ ಕೃಷ್ಣಾ ನದಿ ಪಾತ್ರದ ಕೃಷಿ ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ನಾಶವಾಗಿವೆ.

agriculture-land-drowned-form-krishan-river-flood-in-vijayapura
ಕೃಷಿ ಭೂಮಿಗೆ ನೀರು ನುಗ್ಗಿ ಬೆಳೆ ಹಾನಿ

By

Published : Jul 29, 2021, 12:51 PM IST

ವಿಜಯಪುರ:ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಅಧಿಕ ಪ್ರಮಾಣದಲ್ಲಿ ಆಲಮಟ್ಟಿ ಜಲಾಶಯಕ್ಕೆ ನೀರು ಬಿಟ್ಟಿರುವ ಕಾರಣ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ತಡದ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದ ನೂರಾರು ಎಕರೆ ಭೂಮಿ ಮುಳುಗಡೆಯಾಗಿದೆ. ಈ ಭಾಗದಲ್ಲಿ ಬೆಳೆದಿದ್ದ ಕಬ್ಬು, ಸೂರ್ಯಕಾಂತಿ, ತೊಗರಿ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳು ಸಂಪೂರ್ಣ ನೀರುಪಾಲಾಗಿವೆ.

ಕೃಷಿ ಭೂಮಿಗೆ ನೀರು ನುಗ್ಗಿ ಬೆಳೆ ಹಾನಿ

ಸದ್ಯ ಆಲಮಟ್ಟಿ ಜಲಾಶಯದ ನೀರಿನ ಮಟ್ಟ 519.60 ಮೀಟರ್ ಇದ್ದು, ಈಗಾಗಲೇ 517 ಮೀಟರನಷ್ಟು ಭರ್ತಿಯಾಗಿದೆ. ಇಂದು ಜಲಾಶಯಕ್ಕೆ 4,23,240 ಲಕ್ಷ ಕ್ಯೂಸೆಕ್ ನೀರು ಒಳಹರಿವು ಇದೆ.

ಆಲಮಟ್ಟಿ ಜಲಾಶಯದಿಂದ 3,92,141 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಇದರ ಪರಿಣಾಮ ನದಿ ತಟದ ನೂರಾರು ಎಕರೆ ಕೃಷಿ ಭೂಮಿ ಜಲಾವೃತವಾಗಿದೆ. ಬೆಳೆ ಹಾನಿಯಿಂದ ರೈತರು ಕಣ್ಣೀರು ಹಾಕುವಂತಾಗಿದೆ.

ಓದಿ:ಗುಡ್ಡ ಕುಸಿತಕ್ಕೆ ಹೆದ್ದಾರಿ ಬಂದ್​: ಅಂಕೋಲಾದಲ್ಲಿ ಸಾಲುಗಟ್ಟಿ ನಿಂತ 500ಕ್ಕೂ ಹೆಚ್ಚು ಲಾರಿಗಳು

ABOUT THE AUTHOR

...view details