ವಿಜಯಪುರ :ಕಳೆದ ಹಲವು ವರ್ಷಗಳಿಂದ ಕಡಿಮೆ ವೇತನದಲ್ಲಿ ದುಡಿಯುತ್ತಿರುವ ಅತಿಥಿ ಉಪನ್ಯಾಸಕರನ್ನು ಸರ್ಕಾರ ಖಾಯಂ ನೇಮಕ ಮಾಡಿಕೊಳ್ಳುವಂತೆ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ರಾಜ್ಯ ಸಂಚಾಲಕ ಆರ್ ಡಿ ಚಲವಾದಿ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರ ಅತಿಥಿ ಶಿಕ್ಷಕರ ಬೇಡಿಕೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡುತ್ತಾ ಬಂದಿದೆ. ಅಲ್ಲದೆ ಕಡಿಮೆ ಸಂಭಾವನೆಯಲ್ಲಿ ಹೆಚ್ಚು ಕೆಲಸ ಮಾಡಿಸಿಕೊಳುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ರಾಜ್ಯದ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜಯಗಳ ಪೈಕಿ 14,564 ಹಾಗೂ 10ನೇ ಮತ್ತು 12ನೇ ತರಗತಿಗೆ ಪಾಠ ಮಾಡಲು 22,150 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದೆ. ಆದರೆ, ಕೆಲವರು ಪಿಹೆಚ್ಡಿ ಮುಗಿಸಿದ್ದಾರೆ. ಇವರಿಗೂ ಕೂಡ ಸರ್ಕಾರ ಕಡಿಮೆ ಸಂಭಾವನೆ ನೀಡುತ್ತಿದೆ ಎಂದು ಆರೋಪಿಸಿದರು.