ವಿಜಯಪುರ:ಅಕ್ಷರ ದಾಸೋಹ ಕಾರ್ಮಿಕರಿಗೆ ಶಾಲೆಗಳು ಆರಂಭವಾಗುವವರೆಗೂ ಗೌರವಧನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕ ಸಂಘಟನೆ ಮನವಿ ಸಲ್ಲಿಸಿದೆ.
ಅಕ್ಷರ ದಾಸೋಹ ಕಾರ್ಮಿಕರಿಗೆ ಗೌರವಧನ ಪಾವತಿಸುವಂತೆ ಮನವಿ - vijaypur latest news
ಶಾಲೆಗಳಿಗೆ ರಜೆ ಘೋಷಣೆ ಮಾಡಿದ ದಿನದಿಂದ ಅಕ್ಷರ ದಾಸೋಹ ಕಾರ್ಮಿಕರಿಗೆ ಸರಿಯಾಗಿ ಗೌರವಧನ ನೀಡಿಲ್ಲ. ಪುನಃ ಶಾಲೆಗಳು ಆರಂಭವಾಗುವವರೆಗೂ ಕಾರ್ಮಿಕರಿಗೆ ಗೌರವಧನ ಪಾವತಿಸುವಂತೆ ಕೋರಿ ಎಡಿಸಿ ಔದ್ರಾಮ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಲಾಕ್‌ಡೌನ್ ಜಾರಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದರಿಂದಾಗಿ ಅಕ್ಷರ ದಾಸೋಹ ಕೆಲಸ ನಂಬಿಕೊಂಡು ಬದಕು ಕಟ್ಟಿಕೊಂಡ ಕಾರ್ಮಿಕರು ಇಂದು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಕಳೆದ ಮೂರು ತಿಂಗಳಿಂದ ಉದ್ಯೋಗವಿಲ್ಲದೆ ಕುಟುಂಬದ ನಿರ್ವಹಣೆ ಮಾಡಲಾಗದೆ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಕಾಲ ಕಾಲಕ್ಕೆ ವೇತನ ನೀಡುತ್ತಿಲ್ಲ ಎಂದು ಅಕ್ಷರ ದಾಸೋಹ ಕಾರ್ಮಿಕ ಸಂಘದ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿಕೊಟ್ಟರು.
ಶಾಲೆಗಳಿಗೆ ರಜೆ ಘೋಷಣೆ ಮಾಡಿದ ದಿನದಿಂದ ಅಕ್ಷರ ದಾಸೋಹ ಕಾರ್ಮಿಕರಿಗೆ ಸರಿಯಾಗಿ ಗೌರವಧನ ನೀಡಿಲ್ಲ. ಪುನಃ ಶಾಲೆಗಳು ಆರಂಭವಾಗುವವರೆಗೂ ಕಾರ್ಮಿಕರಿಗೆ ಗೌರವಧನ ಪಾವತಿಸುವಂತೆ ಕೋರಿ ಎಡಿಸಿ ಔದ್ರಾಮ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.