ವಿಜಯಪುರ: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಮಹಿಳಾ ಸೈಕ್ಲಿಂಗ್ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡ ಸಮಗ್ರ ವೀರಾಗ್ರಣಿಯಾಗಿ ಹೊರಹೊಮ್ಮಿತು.
ಅಖಿಲ ಭಾರತ ಅಂತರ್ ವಿವಿ ಮಹಿಳಾ ಸೈಕ್ಲಿಂಗ್ ಕ್ರೀಡಾಕೂಟ.. ರಾಜ್ಯಕ್ಕೆ ವೀರಾಗ್ರಣಿ! - ಓವರಾಲ್ ಚಾಂಪಿಯನ್‌ಶಿಫ್‌ನಲ್ಲಿ ಕರ್ನಾಟಕದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪ್ರಥಮ ಸ್ಥಾನ
ವಿಜಯಪುರದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಮಹಿಳಾ ಸೈಕ್ಲಿಂಗ್ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡ ಸಮಗ್ರ ವೀರಾಗ್ರಣಿಯಾಗಿ ಹೊರಹೊಮ್ಮಿದೆ.
ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಮಹಿಳಾ ಸೈಕ್ಲಿಂಗ್ ಕ್ರೀಡಾಕೂಟ.
ಒಟ್ಟು ನಾಲ್ಕು ದಿನಗಳ ಕಾಲ ನಡೆದ ಸೈಕ್ಲಿಂಗ್ ಕ್ರೀಡಾಕೂಟದಲ್ಲಿ 27 ರಾಜ್ಯಗಳ 127 ವಿದ್ಯಾರ್ಥಿನಿಯರು ಸೈಕ್ಲಿಂಗ್ ಕ್ರೀಡಾಕೂಟದಲ್ಲಿ ಭಾಗವಹಿಸಿದರು. ಓವರಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಪ್ರಥಮ ಸ್ಥಾನ, ಪಂಜಾಬ್ ಯೂನಿವರ್ಸಿಟಿ ಪಟಿಯಾಲ್ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನ ಗುರುನಾನಕ್ ದೇವ ಯುನಿವರ್ಸಿಟಿ ಅಮೃತಸರ್ ಪಡೆದುಕೊಂಡಿತು.
ವಿವಿಧ ರೋಡ್ ಸೈಕ್ಲಿಂಗ್ ಪಂದ್ಯದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಿಎಲ್‌ಡಿ ಶಿಕ್ಷಣ ಸಂಸ್ಥೆಯಲ್ಲಿ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ನೀಡಿ ಗೌರವಿಸಲಾಯಿತು.
TAGGED:
All India Inter-Universities