ವಿಜಯಪುರ :ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯಲ್ಲಿ ಹೆಚ್ಚು ಅನುಸೂಚಿತ ಪಂಗಡಗಳಿಗೆ(ಎಸ್‌ಟಿ) ನೀಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘ ವಿಜಯಪುರ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾಯತ್‌ಯಲ್ಲಿ ಅನ್ಯಾಯ ಆರೋಪ : ಡಿಸಿಗೆ ಮನವಿ ಜಿಲ್ಲೆಯ 12 ತಾಲೂಕಿನ ಪೈಕಿ ಕೇವಲ 4 ತಾಲೂಕಿಗೆ ಮಾತ್ರ ಎಸ್‌ಟಿ ಮೀಸಲಾತಿ ಕಲ್ಪಿಸಲಾಗಿದೆ. ಉಳಿದ 8 ತಾಲೂಕಿನಲ್ಲಿ ಎಸ್‌ಟಿ ಮೀಸಲಾತಿ ಕಲ್ಪಿಸಿಲ್ಲ. ಇದು ನಮ್ಮ ಸಮುದಾಯಕ್ಕೆ ಮಾಡಿದ ಅನ್ಯಾಯ.
ಕೂಡಲೇ 12 ತಾಲೂಕಿನಲ್ಲಿಯೂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಎಸ್‌ಟಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕೆಂದು ನಮ್ಮ ಬೇಡಿಕೆ. ಇಲ್ಲವಾದ್ರೆ ನಮ್ಮ ಹಕ್ಕಿಗಾಗಿ ಪ್ರತಿಭಟನೆ ಮಾಡಬೇಕಾಗುತ್ತದೆ.
ಜೊತೆಗೆ ನ್ಯಾಯಾಲಯದ ಮೊರೆ ಹೋಗುವುದು ಅನಿರ್ವಾಯ ಎಂದು ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ದಳವಾಯಿ ಎಚ್ಚರಿಕೆ ನೀಡಿದ್ದಾರೆ.