ವಿಜಯಪುರ: ನಗರದ ಡಾ. ಅಂಬೇಡ್ಕರ್ ವೃತ್ತದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂಬೇಡ್ಕರ್ ಕಂಚಿನ ಪುತ್ಥಳಿ ನಿರ್ಮಾಣ ಕಾಮಗಾರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ, ಕೃಷ್ಣಾ ಭಾಗ್ಯ ಜಲ ನಿಗಮ ಮಂಡಳಿಯ 1.17ಕೋಟಿ ರೂ. ಅನುದಾನದಲ್ಲಿ ವೃತ್ತ ನಿರ್ಮಾಣ ಹಾಗೂ ಕಂಚಿನ ಪುತ್ಥಳಿ ನಿರ್ಮಾಣ ಮಾಡಲಾಗುವುದು. ಕರ್ನಾಟಕದಲ್ಲಿಯೇ ಮಾದರಿ ಪುತ್ಥಳಿ ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ. ಬರುವ ನವೆಂಬರ್ ಅಥವಾ ಸಂವಿಧಾನ ಸಮರ್ಪಣಾ ದಿನವಾದ ಜ. 26ರಂದು ಕಾಮಗಾರಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.