ವಿಜಯಪುರ: ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಹಾಗೂ ಎತ್ತಿನಗಾಡಿ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಜೈನಾಪುರ ಕ್ರಾಸ್ ಬಳಿ ನಡೆದಿದೆ.
ಎತ್ತಿನಗಾಡಿ ಮತ್ತು ಆಂಬ್ಯುಲೆನ್ಸ್ ಮಧ್ಯೆ ಅಪಘಾತ: ಮೂವರಿಗೆ ಗಂಭೀರ ಗಾಯ - ವಿಜಯಪುರದಲ್ಲಿ ಆಂಬ್ಯುಲೆನ್ಸ್ ಅಪಘಾತ
ಸರ್ಕಾರಿ ಆಂಬ್ಯುಲೆನ್ಸ್ ಹಾಗೂ ಎತ್ತಿನಗಾಡಿ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಜೈನಾಪುರ ಕ್ರಾಸ್ ಬಳಿ ನಡೆದಿದೆ.
ಆಂಬ್ಯುಲೆನ್ಸ್ ಮಧ್ಯೆ ಅಪಘಾತ
ಎತ್ತಿನ ಬಂಡಿಯಲ್ಲಿದ್ದ ಮೂವರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೊಳಸಂಗಿ ಆಸ್ಪತ್ರೆಯ ವ್ಯಾಪ್ತಿಯ ಕೆಎ 42 ಜಿ 0816 ಸಂಖ್ಯೆಯ 108 ವಾಹನ ಇದಾಗಿದೆ. ಅಪಘಾತದಿಂದ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸವನ ಬಾಗೇವಾಡಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.