ಮುದ್ದೇಬಿಹಾಳ: ಪ್ರೋತ್ಸಾಹ ಧನ ₹25 ಸಾವಿರ ನೀಡುವಂತೆ ಒತ್ತಾಯಿಸಿ ತಾಳಿಕೋಟೆ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ತಾಲೂಕು ಘಟಕದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆರು ಮತ್ತು ಸಹಾಯಕಿಯರು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
₹ 25 ಸಾವಿರ ಪ್ರೋತ್ಸಾಹ ಧನ ಕೊಡಿ; ಅಂಗನವಾಡಿ ಕಾರ್ಯಕರ್ತೆಯರ ಒತ್ತಾಯ - protest news
ವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮುದ್ದೇಬಿಹಾಳದ ತಾಳಿಕೋಟಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘದ ತಾಲೂಕು ಅಧ್ಯಕ್ಷೆ ಆರತಿ ಜಾನಕರ ಮಾತನಾಡಿ, ಕೋವೀಡ್-19 ರಾಜ್ಯದಲ್ಲಿ ಕಾಲಿಟ್ಟಾಗಿನಿಂದಲೂ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಜೀವದ ತೊರೆದು ಹಗಲಿರುಳು ಸೇವೆ ಸಲ್ಲಿಸುತ್ತಿದ್ದಾರೆ. ಆದರೂ ನಮ್ಮನ್ನು ವಾರಿಯರ್ಸ್ ಪಟ್ಟಿಗೆ ಸೇರಿಸದಿರುವುದು ಖಂಡನೀಯ. ಹಾಗೆಯೇ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಎಷ್ಟೇ ಮನವಿ ಮಾಡಿದರೂ ಸರ್ಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೇಡಿಕೆಗಳು:
- ₹ 25 ಸಾವಿರ ಪ್ರೋತ್ಸಾಹ ಧನ ನೀಡಬೇಕು
- ಸ್ಥಳೀಯ ಸಾರಿಗೆಯ ಬಸ್ ಪಾಸ್ ಮತ್ತು ಊಟದ ವೆಚ್ಚ ಭರಿಸಬೇಕು.
- ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ (ಐಸಿಡಿಎಸ್) ಅನುದಾನ ಹೆಚ್ಚಿಸಬೇಕು
- ಕೊರೊನಾ ಸಂರಕ್ಷಣೆಯ ಪಿಪಿಟಿ ಕಿಟ್‌ಗಳನ್ನು ಒದಗಿಸಬೇಕು
- ಅಂಗನವಾಡಿ ಕೇಂದ್ರ ಮತ್ತು ಮಕ್ಕಳ ತೂಕದ ಯಂತ್ರಗಳಿಗೆ ಸ್ಯಾನಿಟೈಸ್ ಮಾಡಿಸಬೇಕು
- ಎಲ್‌ಐಸಿ ಆಧಾರಿತ ನಿವೃತ್ತಿ ವೇತನ ಕೊಡಬೇಕು
- ಸೇವಾಹಿರಿತನದ ಆಧಾರದಲ್ಲಿ ಅಂಗನವಾಡಿ ನೌಕರರಿಗೆ ಮುಂಬಡ್ತಿ ಕೊಡಬೇಕು
- ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರನ್ನು ಕಾಯಂಗೊಳಿಸಬೇಕು