ಕರ್ನಾಟಕ

karnataka

ETV Bharat / state

ವಿಜಯಪುರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟ

ವಿಜಯಪುರ ನಗರ ಹಾಗೂ ಜಿಲ್ಲೆಯ ಪಟ್ಟಣ, ತಾಲೂಕು ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೊಳಿಸಿದ್ದು, ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿಸಿ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.

announce-the-reservation-for-president-vice-president-of-vijayapura-corporation
ವಿಜಯಪುರ ಮಹಾನಗರ ಪಾಲಿಕೆ

By

Published : Oct 9, 2020, 1:50 AM IST

Updated : Oct 9, 2020, 10:34 AM IST

ವಿಜಯಪುರ:ರಾಜ್ಯದ ಮಹಾನಗರ ಪಾಲಿಕೆ ಹಾಗೂ ಪಟ್ಟಣ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಲಾಗಿದೆ.

ವಿಜಯಪುರ ನಗರ ಹಾಗೂ ಜಿಲ್ಲೆಯ ಪಟ್ಟಣ, ತಾಲೂಕು ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೊಳಿಸಿದ್ದು, ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿಸಿ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.

ಇಂಡಿ ಪುರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ (ಸಾಮಾನ್ಯ ವರ್ಗ ಎ) ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ (ಸಾಮಾನ್ಯ ವರ್ಗ ಬಿ) ಗೆ ಮೀಸಲಾಗಿದೆ. ಬಸವನಬಾಗೇವಾಡಿ ಬಾಗೇವಾಡಿ ಅಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಮುದ್ದೇಬಿಹಾಳ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗದ (ಸಾಮಾನ್ಯ ವರ್ಗ ಎ) ಮಹಿಳೆಗೆ ಮೀಸಲಾಗಿದೆ. ಸಿಂದಗಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ತಾಳಿಕೋಟಿ ಅಧ್ಯಕ್ಷ ಸ್ಥಾನ ಎಸ್‌ಟಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.

ಆಲಮೇಲ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ (ಸಾಮಾನ್ಯ ವರ್ಗ ಎ). ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ, ದೇವರ ಹಿಪ್ಪರಗಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ, ಕೊಲ್ಹಾರ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಸಾಮಾನ್ಯ ವರ್ಗ ಎ), ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಮನಗೂಳಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ (ಸಾಮಾನ್ಯ ವರ್ಗ ಎ), ಉಪಾಧ್ಯಕ್ಷ ಸ್ಥಾನ ಎಸ್‌ಸಿ, ತಿಕೋಟಾ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್‌ಟಿ, ನಿಡಗುಂದಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ನಾಲತವಾಡ ಅಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ (ಸಾಮಾನ್ಯ ವರ್ಗ ಎ) ಮಹಿಳೆಗೆ ಹಾಗೂ ಚಡಚಣ ಅಧ್ಯಕ್ಷ ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಬಿಸಿಎ ಮಹಿಳೆಗೆ ಮೀಸಲಾಗಿಸಿ ರಾಜ್ಯಪತ್ರ ಹೊರಡಿಸಲಾಗಿದೆ.

Last Updated : Oct 9, 2020, 10:34 AM IST

ABOUT THE AUTHOR

...view details