ಕರ್ನಾಟಕ

karnataka

ETV Bharat / state

ಮಹಾದೇವ ಭೈರಗೊಂಡ ಹತ್ಯೆ ಯತ್ನ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ - ಮಹಾದೇವ ಭೈರಗೊಂಡ ಮೇಲೆ ಗುಂಡಿನ ದಾಳಿ ಪ್ರಕರಣ

ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡ ಕೊಲೆ ಯತ್ನ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.

another-accused-arrested-in-attempted-murder-of-mahadeva
ಮಹಾದೇವ ಭೈರಗೊಂಡ ಹತ್ಯೆ ಯತ್ನ ಪ್ರಕರಣ

By

Published : Nov 22, 2020, 2:03 AM IST

ವಿಜಯಪುರ:ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡ ಕೊಲೆ ಯತ್ನ ಹಾಗೂ ಆತನ ಅಂಗರಕ್ಷಕ, ಕಾರು ಚಾಲಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿಜಯಪುರ ನಗರದ ಬಂಬಳ ಅಗಸಿ ನಿವಾಸಿ ಶ್ರೀಶೈಲ ಸಿದ್ದಪ್ಪ ಡಾಂಗಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ ಪಿಸ್ತೂಲ್, ಒಂದು‌ ಜೀವಂತ ಗುಂಡು ಹಾಗೂ ಒಂದು ಬೈಕ್ ವಶ ಪಡಿಸಿಕೊಳ್ಳಲಾಗಿದೆ.

ಮತ್ತೊಬ್ಬ ಆರೋಪಿ ಬಂಧನ

ನವೆಂಬರ್ 2ರಂದು ವಿಜಯಪುರ ಹೊರವಲಯದ ಕನ್ನಾಳ‌ ಕ್ರಾಸ್ ಬಳಿ ಮಹಾದೇವ ಸಾಹುಕಾರ ಹಾಗೂ ಆತನ ಬೆಂಬಲಿಗರನ್ನು ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿದ್ದರು. ಇದರಲ್ಲಿ ಸದ್ಯ ಮಹಾದೇವ ಸಾಹುಕಾರ ಭೈರಗೊಂಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈತನ ಇಬ್ಬರು ಬೆಂಬಲಿಗರು ಗುಂಡೇಟಿನಿಂದ ಗಾಯಗೊಂಡು ಸಾವನ್ನಪ್ಪಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 24 ಜನರನ್ನು ಬಂಧಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details